ಬೆಂಗಳೂರು:ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸುತ್ತಿದ್ದಂತೆ ಅಸಮಾಧಾನ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಯ ಕೂಗು ಕೇಳಿಬಂದಿದೆ.
ವಿಧಾನಸೌಧದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ನಿರ್ಧಾರಕ್ಕೆ ಸ್ವಾಗತ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ನಮ್ಮ ತಕರಾರು ಇಲ್ಲ. ಅದೇ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ ಎಂದು ಆಗ್ರಹಿಸಿದ್ದಾರೆ.
ವೀರಶೈವ ಲಿಂಗಾಯತ ನಿಗಮ ರಚನೆಯ ಸಿಎಂ ಆದೇಶವನ್ನು ಕೆಲವರು ಸ್ವಾಗತಿಸಿದ್ದರೆ, ಬಹುತೇಕರು ವಿರೋಧಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಶ್ರೀಗಳು, ಗದಗನ ತೋಂಟದಾರ್ಯ ಮಠದ ಡಾ.ಸಿದ್ಧರಾಮ ಸ್ವಾಮೀಜಿ, ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಸೇರಿದಂತೆ ಬಹುತೇಕರು ಇದು ಸೂಕ್ತ ನಿರ್ಧಾರವಲ್ಲ ಎಂಬ ಸಲಹೆಯನ್ನು ಸಿಎಂಗೆ ಮಾಧ್ಯಮದ ಮೂಲಕ ನೀಡಿದ್ದಾರೆ. ಜಾತಿಗೊಂದು ನಿಗಮ ಮಾಡಿಕೊಂಡು ಹೋಗುತ್ತಾ ಇದ್ದರೆ ಇದಕ್ಕೆ ಮಿತಿ ಇರೋದಿಲ್ಲ ಎಂದಿದ್ದಾರೆ.
ವೀರಶೈವ ಲಿಂಗಾಯತ ನಿಗಮಕ್ಕೆ ಸಿಎಂ ಅಸ್ತು: ಈ ಆದೇಶಕ್ಕೆ ಡಾ.ಶಾಮನೂರು ಶಿವಶಂಕರಪ್ಪ ಏನಂದ್ರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 7 =
Remember me
