ತುಮಕೂರು:ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ರಚನೆ ಮಾಡ್ತಿರೋ ವಿಚಾರ ಕೇಳಿ ನನಗೆ ಆಶ್ಚರ್ಯ ಅನಿಸುತ್ತದೆ. ಜಾತಿಗೊಂದು ನಿಗಮ, ಪ್ರಾಧಿಕಾರ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.
ನನ್ನ ಪ್ರಕಾರ ಎಲ್ಲ ಜಾತಿಯಲ್ಲೂ ಹಿಂದುಳಿದವರಿದ್ದಾರೆ. ಎಲ್ಲ ಸಮಾಜದಲ್ಲಿಯೂ ಕಡುಬವರು ಇದ್ದಾರೆ. ನಿಗಮ ಸ್ಥಾಪನೆಗೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಸರ್ಕಾರ ಮಾಡಿದರೆ ಒಳ್ಳೆಯದು ಎಂದು ಶ್ರೀಗಳು ಹೇಳಿದ್ದಾರೆ.
ಸರ್ಕಾರ ಇರೋದು ಸಮಗ್ರ ರಾಜ್ಯದ ಅಭಿವೃದ್ಧಿಗಾಗಿ. ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಅವಕಾಶ ಕೊಡುವ ವ್ಯವಸ್ಥೆ ಕಲ್ಪಿಸಿ ಕೊಟ್ಟರೆ ತುಂಬಾ ಸಂತೋಷ. ಒಂದು ಜಾತಿಗಾಗಿ ಪ್ರಾಧಿಕಾರ ಮಾಡಿದರೆ ಮುಂದೆ ಪ್ರತಿಯೊಬ್ಬರೂ ಕೇಳುತ್ತಾರೆ. ಇದು ಸಹಜ ಆಗುತ್ತೆ ಎಂದು ಶ್ರೀಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮಂಗಳವಾರ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಲಾಗುತ್ತಿದೆ ಎಂದಿದ್ದರು. ಈ ಸಂಬಂಧ ರಾಜ್ಯದಾದ್ಯಂತ ಬಹುತೇಕ ಮಠಾಧೀಶರು, ಗಣ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿಎಂ ಆದೇಶಕ್ಕೆ ಭುಗಿಲೆದ್ದ ಅಸಮಾಧಾನ, ಒಕ್ಕಲಿಗರಿಂದಲೂ ಬಂತು ಡಿಮಾಂಡ್​ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
