ಮಂಡ್ಯ:ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲೆ ಮತ್ತು ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಗೆ ಡಿ.27ರಂದು ಮತದಾನ ನಡೆಯಲಿದೆ ಎಂದು ಮಹಾಸಭಾದ ಚುನಾವಣಾಧಿಕಾರಿ ಎಚ್.ಎಂ.ರೇಣುಕ ಪ್ರಸನ್ನ ತಿಳಿಸಿದರು.ಡಿ.12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. 15ರಂದು ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, 16ರಂದು ನಾಮಪತ್ರ ಪರಿಶೀಲನೆ, 19ರಂದು ನಾಮಪತ್ರ ವಾಪಾಸ್ ಪಡೆಯಲು ಅಂತಿಮ ದಿನವಾಗಿದೆ. ಈಗಾಗಲೇ ರಾಜ್ಯ ಮಟ್ಟದ ಸಮಿತಿಗೆ ಚುನಾವಣೆ ನಡೆದಿದೆ. ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರಗಳಲ್ಲಿ ಚುನಾವಣೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಪದಾಧಿಕಾರಿಗಳಾದ ಸಾಗನಹಳ್ಳಿ ನಟರಾಜು, ನಂಜುಂಡೇಶ್, ಸಿದ್ದಲಿಂಗಯ್ಯ ಬನ್ನಂಗಾಡಿ, ಸುಬ್ರಹ್ಮಣ್ಯ, ಧನಂಜಯ, ಗಂಗಣ್ಣ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
