ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ, ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ. ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು ಎಂದು ತಮ್ಮ ಪತ್ರದಲ್ಲಿ ಶ್ಲಾಘಿಸಿದ್ದಾರೆ.
ಇದನ್ನೂ ಓದಿ:ಅನ್ನಭಾಗ್ಯ ಯೋಜನೆ; ಅಕ್ಕಿ ಕಡಿತ ಖಂಡಿಸಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದ ಬಿಜೆಪಿ ಶಾಸಕರು
ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.
ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + 18 =
Remember me
