ಚಿಕ್ಕಬಳ್ಳಾಪುರ:ರಾಜ್ಯದಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಕೃಷಿ ಇಲಾಖೆಯ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಕೃಷಿ ಇಲಾಖೆಯ ಅಧಿಕಾರಿ ವಿನಯ್​ ಹಾಗೂ ಗುತ್ತಿಗೆ ನೌಕರ ಲೋಕೇಶ್ ಸಾವಿಗೀಡಾದವರು. ಕೃಷಿ ಸಚಿವರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಇವರು ಮರಳಿ ಹೋಗುವಾಗ ಅಪಘಾತ ಸಂಭವಿಸಿದೆ.
ಚಿಂತಾಮಣಿಯಿಂದ ಚಿಕ್ಕಬಳ್ಳಾಪುರಕ್ಕೆ ಬಂದಿದ್ದ ಇವರು, ಕಾರ್ಯಕ್ರಮ ಮುಗಿಸಿ ವಾಪಸ್ ಹೋಗುವಾಗ ಶಿಡ್ಲಘಟ್ಟದ ಪಿಂಡಿಪಾಪನಹಳ್ಳಿ ಗೇಟ್ ಬಳಿ ಅಪರಿಚಿತ ವಾಹನವೊಂದು ಇವರ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಲಿಸುತ್ತಿದ್ದ ಬೈಕ್​ ಮೇಲೇ ಬಿದ್ದ ಮರ, ಸವಾರ ಸ್ಥಳದಲ್ಲೇ ಸಾವು; ಬೈಕ್​ಗಳು ಜಖಂ, ಕಾರು ಭಾರಿ ಅಪಾಯದಿಂದ ಪಾರು!

ಡಿ.ಕೆ.ಶಿವಕುಮಾರ್​​ರನ್ನು ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲುಶಿಕ್ಷೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
