ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರು ನಗರದಿಂದ ಬೇರೆ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮೇಲ್ಸೇತುಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್​  ಜನವರಿ 16ರ ರಾತ್ರಿ 11 ಗಂಟೆಯಿಂದ ಜ.19ರ ಬೆಳಗ್ಗೆ 11ವರೆಗೆ ಬಂದ್​ ಆಗಲಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಪೀಣ್ಯ ಮೇಲ್ಸೇತುವೆ ಕಾಮಗಾರಿಯಲ್ಲಿ ಲೋಪ ಕಂಡುಬಂದಿದ್ದು, ಹೆಚ್ಚುವರಿ ಕಾಮಗಾರಿ ನಡೆಸಲಾಗಿದೆ. ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಪೀಣ್ಯ ಮೇಲ್ಸೇತುವೆ ಮೇಲೆ ವಾಹನ ಸಂಚಾರವನ್ನು ನಿರ್ಬಂಧಿಸಿದೆ. ಒಟ್ಟು ನಾಲ್ಕು ದಿನಗಳ ಕಾಲ ಮೇಲ್ಸೇತುವೆ ಬಂದ್​ ಆಗಿರಲಿದ್ದು, ಸರ್ವೀಸ್​ ರಸ್ತೆ ಬಳಸುವಂತೆ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.
ಪೀಣ್ಯ ಫ್ಲೈಓವರ್ ಸಾಮರ್ಥ್ಯ ಕುಗ್ಗಿದ ಹಾಗೂ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಲಘು ವಾಹನ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಐಐಎಸ್​ಸಿ ತಜ್ಞರ ವರದಿ ಆಧಾರದ ಮೇರೆಗೆ ಕೇಬಲ್ ಅಳವಡಿಸಲಾಗುತ್ತಿದ್ದು, ಒಟ್ಟು 120 ಪಿಲ್ಲರ್​ಗಳಿಗೆ 1200 ಕೇಬಲ್ಗಳನ್ನ ಅಳವಡಿಕೆ ಮಾಡಲಾಗಿದೆ. ಸಾಮರ್ಥ್ಯ ಪರೀಕ್ಷೆ ಬಳಿಕ ಭಾರೀ ವಾಹನಗಳ ಓಡಾಟಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.
Peenya Flyover will be closed from 11PM on 16/01/24 till 11AM on 19/01/24 for load testing. Commuters are requested to use the service road below the flyover.ಲೋಡ್ ಪರೀಕ್ಷೆಗಾಗಿ ಪೀಣ್ಯ ಫ್ಲೈಓವರ್ ಮೇಲೆ ದಿ :16/01/24 ರಂದು ರಾತ್ರಿ 11 ಗಂಟೆಯಿಂದ 19/01/24 ರಂದು ಬೆಳಿಗ್ಗೆ 11 ಗಂಟೆಯವರೆಗೆ ಸಂಚಾರವನ್ನು…pic.twitter.com/PQZZqeDqK1
ಇದನ್ನೂ ಓದಿ:ಫಿನಾಲೆ ತಲುಪಲು ಭರ್ಜರಿ ಆಫರ್​ ನೀಡಿದ ಬಿಗ್​ಬಾಸ್​; ಸ್ಫರ್ಧಿಗಳ ನಡುವೆ ಶುರುವಾಯ್ತು ಭಾರೀ ಪೈಪೋಟಿ
ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಫ್ಲೈಓವರ್ ಪಕ್ಕದ ಎನ್ ಎಚ್-4 ಮತ್ತು ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ-ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, -ಎಸ್​ಆರ್​ಎಸ್​ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದಾಗಿದೆ.
ಸಿಎಂಟಿಐ ಜಂಕ್ಷನ್​​ನಿಂದ ನೆಲಮಂಗಲ ಕಡೆಗೆ ಮೇಲ್ಸೇತುವೆ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫ್ಲೈ ಓವರ್ ಪಕ್ಕದ ಎನ್ ಎಚ್-4 ಮತ್ತು ಸರ್ವಿಸ್ ರಸ್ತೆಯಲ್ಲಿ ಎಸ್‌ಆರ್‌ಎಸ್​​ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- 8ನೇ ಮೈಲಿ ಮುಖಾಂತರ ಸಂಚರಿಸಲು ಅನುವು ಮಾಡಿಕೊಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − four =
Remember me
