ಹಾವೇರಿ:ವೇಗ ನಿಯಂತ್ರಿಸಲಾಗದೆ ಬೋಲೆರೊ ವಾಹನ ಪಲ್ಟಿಯಾದ ಪರಿಣಾಮ ಮೂವರು ಕುರಿಗಾಹಿಗಳು ಮತ್ತು 10 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಸಿಮ್ಲಾ ದಾಬಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಇದನ್ನೂ ಓದಿ:ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಗೆ ಮತ ನೀಡಬೇಕೆ?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಮೈಲಾರಪ್ಪ ಕೈದಾಳ (40), ಗುಡ್ಡಪ್ಪ ಕೈದಾಳ (42), ಶಿವಕುಮಾರ ಹೊಳೆಯಪ್ಪನವರ (22) ಮೃತಪಟ್ಟ ಕುರಿಗಾಹಿಗಳು. ಮೃತರು ರಾಣೆಬೆನ್ನೂರ ತಾಲೂಕಿನ ಕಾಕೋಳ ಗ್ರಾಮದ ನಿವಾಸಿಗಳು ಎಂದು ವರದಿಯಾಗಿದೆ. ಬಾಗಲಕೋಟೆಯಿಂದ ಖರೀದಿಸಿದ ಕುರಿಗಳೊಂದಿಗೆ ಊರಿಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಮೃತರು ಕುರಿಗಳ ಮಾರಾಟ ಮಾಡುವ ವ್ಯಾಪಾರಿಗಳಾಗಿದ್ದರು ಎನ್ನಲಾಗಿದೆ. ವೇಗದಲ್ಲಿ ಬಂದ ಬೊಲೆರೊ ವಾಹನ ಮುಂದಿನ ವಾಹನಕ್ಕೆ ಡಿಕ್ಕಿ ಹೊಡೆದ ಕೂಡಲೇ ಪಲ್ಟಿಯಾಗಿದೆ. ಘಟನೆಯ ಪರಿಣಾಮ ಗಾಡಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದು, ಸ್ಥಳವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
2021ರಲ್ಲಿ ಮುಂಬೈ ಇಂಡಿಯನ್ಸ್​ ಬಿಟ್ಟಿದ್ದೂ ಇದೇ ಕಾರಣಕ್ಕೆ… ಮುಖಕ್ಕೆ ಹೊಡದಂಗೆ ಹೇಳಿದ್ರು ರವಿಶಾಸ್ತ್ರಿ

26 ವರ್ಷಕ್ಕೆ 22 ಮಗುವಿನ ತಾಯಿ ಈ ಯುವತಿ! 105 ಮಕ್ಕಳನ್ನು ಪಡೆಯುವುದೇ ಈಕೆಯ ಗುರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
