ಬೆಂಗಳೂರು:ಟೊಮ್ಯಾಟೋ ತುಂಬಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಂಸಿ ಯಾರ್ಡ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಭಾಸ್ಕರ್ ಹಾಗೂ ಆತನ ಪತ್ನಿ ಸಿಂಧುಜಾ ಎಂದು ಗುರುತಿಸಲಾಗಿದೆ. ರಾಕಿ, ಮಹೇಶ್​ ಹಾಗೂ ಕುಮಾರ್ ಎಸ್ಕೇಪ್​ ಆಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ:ರವಿಚಂದ್ರನ್​ ಮನೇಲಿ ತಡರಾತ್ರಿವರೆಗೂ ನಡೆದ ಸುದೀಪ್​-ಕುಮಾರ್ ಸಂಧಾನ ಸಭೆ ಯಶಸ್ವಿಯಾಯ್ತಾ​? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಸಿಂಧುಜಾ ಹಾಗೂ ಭಾಸ್ಕರ್, ಕಳ್ಳತನ ಮಾಡಲು ರಾಕಿ ಮನೆಯಲ್ಲಿ ಪ್ಲ್ಯಾನ್​ ಮಾಡಿದ್ದರು. ಟೊಮ್ಯಾಟೋ ದುಬಾರಿ ಆಗಿರುವ ಹಿನ್ನೆಲೆಯಲ್ಲಿ ಯಶವಂತಪುರದ ಆರ್​ಎಂಸಿ ಯಾರ್ಡ್ ಬಳಿಯಿಂದ ಟೊಮ್ಯಾಟೋ ತುಂಬಿದ್ದ ಗೂಡ್ಸ್ ವಾಹನವನ್ನು ಕದ್ದು, ಪರಾರಿಯಾಗಿದ್ದರು. ಬಳಿಕ ಚೆನ್ನೈ ಮಾರುಕಟ್ಟೆಯಲ್ಲಿ ಟೊಮ್ಯಾಟೋ ಮಾರಾಟ ಮಾಡಿದ್ದರು. ಇದಾದ ಬಳಿಕ ಖಾಲಿ ವಾಹನವನ್ನು ತಂದು ಪೀಣ್ಯ ಬಳಿ ನಿಲ್ಲಿಸಿ, ಬೇರೆ ಕಾರಿನಲ್ಲಿ ಎಸ್ಕೇಪ್ ಆಗಿದ್ದರು.
ಈ ಸಂಬಂಧ ವಾಹನ ಮಾಲೀಕ ಮತ್ತು ಟೊಮ್ಯಾಟೋ ರೈತ ದೂರು ದಾಖಲಿಸಿದ್ದ. ತನಿಖೆ ಆರಂಭಿಸಿದ ಪೊಲೀಸರಿಗೆ ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂಬರ್ ಪ್ಲೇಟ್​ ಇಲ್ಲದ ಕಾರಿನಲ್ಲಿ ಆರೋಪಿಗಳು ಪರಾರಿಯಾಗಿದ್ದರಿಂದ ಪೊಲೀಸರಿಗೆ ಈ ಪ್ರಕರಣ ತಲೆನೋವಾಗಿ ಪರಿಣಮಿಸಿತ್ತು. ಕೊನೆಗೂ ಸಿಸಿಟಿವಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿ, ಕೊನೆಗೂ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಇಬ್ಬರು ಹೆಣ್ಣುಮಕ್ಕಳ ಜತೆ ಬಾವಿಗೆ ಹಾರಿದ ತಾಯಿ: ಓರ್ವ ಬಾಲಕಿ ಪಾರು, ಚಿಕ್ಕಬಳ್ಳಾಪುರದಲ್ಲಿ ಕರುಣಾಜನಕ ಘಟನೆ

ಆಗಸ್ಟ್​ 1ರಿಂದ ಹಾಲಿನ ದರ ಏರಿಕೆ ಬರೆ: ನಂದಿನಿ ಹಾಲಿನ ದರ ಎಷ್ಟೆಷ್ಟು ಹೆಚ್ಚಾಗಲಿದೆ? ಇಲ್ಲಿದೆ ಮಾಹಿತಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 1 =
Remember me
