
ಬೆಂಗಳೂರು:ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿಗೆ ನೀಡಿರುವ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಆ.17ರಂದು ಅರಮನೆ ಆವರಣ ತ್ರಿಪುರವಾಸಿನಿಯಲ್ಲಿ ನಮ್ಮಭಿಮಾನದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ನೌಕರರ ಪರವಾಗಿ ಅಭಿನಂದಿಸಲಾಗುವುದು ಎಂದರು.ಕಾರ್ಯಕ್ರಮಕ್ಕೆ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆರ್ಥಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಡಾ.ಸಿ.ಪಿ.ಜಾರ್, ಡಾ.ಎಂ.ಟಿ.ರೇಜು ಅವರನ್ನು ಆಹ್ವಾನಿಸಲಾಗಿದೆ ಎಂದರು.ನಮ್ಮಭಿಮಾನದ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರ ನೌಕರರು ಭಾಗವಹಿಸುತ್ತಿದ್ದಾರೆ. ಅವರಿಗೆಲ್ಲ ಸರ್ಕಾರ ಒಒಡಿ ಸೌಲಭ್ಯದಡಿ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದೆ ಎಂದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × 2 =
Remember me
