ಶಿವಮೊಗ್ಗ: ಕರ್ನಾಟಕದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದ್ದು ರಾಜ್ಯವನ್ನು ದಿವಾಳಿ ಅಂಚಿಗೆ ತಗೆದುಕೊಂಡು ಹೋಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಜೂ.24ಕ್ಕೆ ಮುಂದೂಡಿಕೆ!
ಮತ್ತೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಸಮಸ್ಯೆ ಇರಲಿಲ್ಲ. ಒಂದೇ ವರ್ಷದಲ್ಲಿ ಇವರ ಆಡಳಿತದಿಂಸ ಆರ್ಥಿಕ ಸಂಕಷ್ಟಕ್ಕೆ ರಾಜ್ಯ ಸಿಲುಕಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದ್ದು ರಾಜ್ಯವನ್ನು ದಿವಾಳಿ ಅಂಚಿಗೆ ತಗೆದುಕೊಂಡು ಹೋಗುತ್ತಿದೆ. ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಸಮಸ್ಯೆ ಇರಲಿಲ್ಲ. ಒಂದೇ ವರ್ಷದಲ್ಲಿ ಇವರ ಆಡಳಿತದಿಂದ ಆರ್ಥಿಕ ಸಂಕಷ್ಟಕ್ಕೆ ರಾಜ್ಯ ಸಿಲುಕಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ವಿರುದ್ಧ ದೂರುವ ಚಾಳಿ ರೂಢಿಸಿಕೊಂಡಿದ್ದಾರೆ:ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ದೂರುವ ಚಾಳಿ ರೂಢಿಸಿಕೊಂಡಿದ್ದಾರೆ. ಪ್ರತಿಯೊಂದರ ದರ ಏರಿಕೆ ಮಾಡುತ್ತಿದ್ದು ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದನ್ನು ಆಡಳಿತ ಪಕ್ಷದ ನಾಯಕರೇ ಹೇಳುತ್ತಿದ್ದಾರೆ. ಜನಪರ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅನುಭವಿ ಮುಖ್ಯಮಂತ್ರಿಗಳು ಇಂದು ಆಡಳಿತ ನಡೆಸಲು ಪರದಾಡುತ್ತಿದ್ದಾರೆ. ಇದರ ಮಧ್ಯೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ:ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ಮಾಡಿದ್ದಾರೆ. ಒಂದೆಡೆ ಭ್ರಷ್ಟಾಚಾರ ಇನ್ನೊಂದೆಡೆ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಜನ ಸಾಮನ್ಯರ ಪಾಲಿಗೆ ಸರ್ಕಾರ ಸತ್ತೋಗಿದೆ. ಆರ್ಥಿಕ ಶಕ್ತಿ ಕೊಡುವ ಯೋಜನೆಯ ಹಣದಲ್ಲಿ ಭ್ರಷ್ಟಾಚಾರ ಮಾಡಿದ್ದು ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ. ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡದೇ ಇದ್ದರೆ ಮುಂದಿನ ಜೂನ್ 20ರಂದು ರಾಜ್ಯಾದ್ಯಂತ ರಸ್ತೆ ತಡೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆಡಳಿತ ಪಕ್ಷದ ಶಾಸಕರು ಹತಾಶರಾಗಿದ್ದಾರೆ. ಆಡಳಿತ ಪಕ್ಷದ ಶಾಸಕರು ತಲೆ ಎತ್ತಿಕೊಂಡು ಒಡಾಡಲು ಆಗುತ್ತಿಲ್ಲ. ಸರ್ಕಾರ ಬಂದ ಮೇಲೆ ಎಷ್ಟು ಕಿ.ಲೋ ರಸ್ತೆ ಮಾಡಿದ್ದಾರೆ? ಸರ್ಕಾರದ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಪ್ರಶ್ನಿಸಿದ ಅವರು, ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಪೆಟ್ರೋಲ್ ದರ ಇಳಿಸುವರೆಗೆ ಹೋರಾಟ ಮುಂದುವರಿಯುತ್ತದೆ ಎಂದರು.

ಪವಿತ್ರ ಗೌಡ, ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕೊಲೆಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ಕಾನೂನು ರೀತಿಯಲ್ಲಿ ತನಿಖೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಧ್ಯಕ್ಷರು, ಮೃತನ ಪೋಷಕರು ಹಾಗೂ ಪತ್ನಿಗೆ ಸಾಂತ್ವನ ಹೇಳಿ ಪಕ್ಷದ ವತಿಯಿಂದ ಎರಡು ಲಕ್ಷ ಪರಿಹಾರ ನೀಡಿದರು.
ಅಮಿತ್ ಷಾ ಭೇಟಿಯಾದ ಭಾರತ ತಂಡದ ಮಾಜಿ ಆಟಗಾರ ಗೌತಮ್​ ಗಂಭೀರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 1 =
Remember me
