ಬೆಂಗಳೂರು:ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ (ಹಿಂದಿನ ಪತ್ರಕರ್ತರ ಅಕಾಡೆಮಿ) ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅರ್ಜುನ್ ದೇವ ಅವರು ಇಂದು (ಏಪ್ರಿಲ್​ 24) ನಿಧನ ಹೊಂದಿದ್ದಾರೆ.
ಅರ್ಜುನ್​ ದೇವ ಅವರಿಗೆ 92 ವರ್ಷ ವಯಸ್ಸಾಗಿತ್ತು. ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅರ್ಜುನ್​ ದೇವ ಅವರು ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.
ಅರ್ಜುನ್​ ದೇವ ಅವರು ಹುಟ್ಟೂರು ಕೋಲಾರ ಜಿಲ್ಲೆಯ ಚೌಡದೇವನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.
ಹಿರಿಯ ಪತ್ರಕರ್ತರದ ಅರ್ಜುನ್ ದೇವ್‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿಎಸ್​ಕೆ ಫ್ಯಾನ್ಸ್​ಗಳ ಮಧ್ಯೆ ಏಕಾಂಗಿ ಲಕ್ನೋ ಅಭಿಮಾನಿ ಕೂಗಾಟ! ಅವನ ಲಕ್​ ಚೆನ್ನಾಗಿತ್ತು, ಪಾರಾಗಿದ್ದಾನೆ ಎಂದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − seven =
Remember me
