ಉಡುಪಿ:ಕರೋನ ವಾರಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪೆರ್ಣಂಕಿಲದ ಆಶಾ ಕಾರ್ಯಕರ್ತೆ ಸ್ವತಃ ರಿಕ್ಷಾ ಚಲಾಯಿಸಿಕೊಂಡು ಹೋಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿ ಕರ್ತವ್ಯಪ್ರಜ್ಞೆ ಮೆರೆದಿದ್ದು, ಈ ಕಾರ್ಯಕ್ಕೆ ಭಾರತದ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಟ್ವಿಟರ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ಪೆರ್ಣಂಕಿಲ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಗುರುವಾರ ಬೆಳಗಿನ ಜಾವ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ಆಶಾ ಕಾರ್ಯಕರ್ತೆಯಾಗಿರುವ ರಾಜೀವಿ ಅವರು ಸ್ವತಃ ರಿಕ್ಷಾ ಚಲಾಯಿಸಿಕೊಂಡು 20 ಕಿಲೋಮೀಟರ್ ದೂರದ ಉಡುಪಿಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದರು.
ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದು, ಇದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಉಪರಾಷ್ಟ್ರಪತಿ ಅತ್ಯುತ್ತಮ ಕಾರ್ಯ ಎಂದು ಶ್ಲಾಘಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − seven =
Remember me
