ಬೆಂಗಳೂರು:ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟಿನ ಇಂದಿನ ತೀರ್ಪು ಸಾಕ್ಷಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ ಅಷ್ಟೇ ಬೇಗ ಆ ಆದೇಶ ತೆರವಾಗಬೇಕು ಎಂದು ಆಗ್ರಹಿಸಿದರು.ರಾಹುಲ್ ಗಾಂಧಿ ಅವರ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ. ದೇಶ ಹಾಗೂ ಜನರ ಹಿತಕ್ಕಾಗಿ ರಾಹುಲ್ ಗಾಂಧಿ ಅವರು ಎತ್ತುತ್ತಿರುವ ಧ್ವನಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ತೀರ್ಪು ಮಹತ್ವದ್ದಾಗಿದೆ ಎಂದರು.ನ್ಯಾಯ ನೀಡುವ ಪೀಠದಿಂದ ಅನ್ಯಾಯ ಆಗುವುದಿಲ್ಲ ಎಂಬ ಮಾತನ್ನು ನಾನು ಹಿಂದೆಯೇ ಹೇಳಿದ್ದೆ. ಈ ದೇಶದ ಅತ್ಯುನ್ನತ ನ್ಯಾಯಾಲಯದ ತೀರ್ಮಾನ ಪ್ರಜಾಪ್ರಭುತ್ವದಲ್ಲಿ ದ್ವೇಷದ ರಾಜಕಾರಣಕ್ಕೆ ಜಾಗವಿಲ್ಲ ಎಂಬ ಸಂದೇಶ ಸಾರಿದೆ ಎಂದು ತಿಳಿಸಿದರು.ಇದನ್ನು ಚುನಾವಣೆ ವಿಷಯವಾಗಿ ಬಳಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರೆ. ಚುನಾವಣೆಯಲ್ಲಿ 7 ಲಕ್ಷ ಮತಗಳ ಅಂತರದಲ್ಲಿ ಗೆದ್ದಂತಹವರ ಸದಸ್ಯತ್ವವನ್ನು ಯಾವ ರೀತಿ ಕುತಂತ್ರದ ಮೂಲಕ ಅನರ್ಹ ಮಾಡಿಸಿದ್ದಾರೆ ಎಂದು ಜನರು ಗಮನಿಸಿದ್ದಾರೆ ಎಂದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × four =
Remember me
