ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ರೋಡ್​ ರೇಜ್​ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪುಂಡರ ಹಾವಳಿ ಮಿತಿ ಮೀರುತ್ತಿದೆ. ನಗರದ ಸರ್ಜಾಪುರದ ದೊಡ್ಡಕನ್ನೆಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋವನ್ನು ಸಂತ್ರಸ್ತರು ತಮ್ಮ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಘಟನೆ ಸಂಬಂಧ ಬೆಳ್ಳಂದೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಕುಡಿದ ಮತ್ತಿನಲ್ಲಿ ಬೈಕ್​ ಸವಾರನೋರ್ವ ವಾಹನ ಚಾಲನೆ ಮಾಡಿದ್ದು, ಅಮಲಿನಲ್ಲಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿಗೆ ಡಿಕ್ಕಿ ಹೊಡೆದ ಬಳಿಕ ಒಳಗೆ ಕುಳಿತಿದ್ದವರ ಮೇಲೆ ಹಲ್ಲೆಗೆ ಮುಂದಾಗಿರುವ ವ್ಯಕ್ತಿಯೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ನೋಡಬಹುದಾಗಿದೆ. ಈ ವೇಳೆ ಕಾರಿನೊಳಗಿರುವ ವ್ಯಕ್ತಿ ಕಾರಿನೊಳಗೆ ಮಗುವಿದೆ ಎಂದು ಬೇಡಿಕೊಂಡಿದ್ದಾನೆ. ಆದರೆ ಇದ್ಯಾವುದನ್ನೂ ಕೇಳಿಸದ ಪುಂಡ, ಬಾಗಿಲು ತೆಗೆಯುವಂತೆ ರಂಪಾಟ ಮಾಡಿದ್ದಾನೆ. ಆದರೆ ಬಾಗಿಲು ತರೆಯದೇ ಪತ್ನಿ ಹಾಗೂ ಮಗುವನ್ನು ಸುರಕ್ಷಿತವಾಗಿರಿಸಲು ಪ್ರಯತ್ನಿಸಿದ್ದಾರೆ.
@BlrCityPolice@CPBlr@bellandurutrfpsWhat's happening on Sarjapur Road? A family in car is being attacked by bike brone assailants! Please help!The incident happened at 10:30pm at street 1522, Doddakannelli Junction! The couple just reached police station!#crime#Bengalurupic.twitter.com/qjDI51Tqb4
ಇದನ್ನೂ ಓದಿ:ನಮ್ಮಲ್ಲಿ ಮುಖ್ಯವಾದುದ್ದು ಇಲ್ಲವೆಂದ ಪಿಸಿಬಿ; ಪಾಕ್​ ಕೈ ತಪ್ಪುತ್ತಾ ಚಾಂಪಿಯನ್ಸ್​ ಟ್ರೋಫಿ ಆತಿಥ್ಯ?
ಕಾರಿನ ಮುಂಭಾಗಕ್ಕೆ ಬಂದ ಪುಂಡ, ಕಾರಿನ ವೈಪರ್ ಕಿತ್ತು ದಾಳಿ ಮಾಡಿದ್ದಾನೆ. ಬಳಿಕ ಕಲ್ಲಿನಿಂದ ದಾಳಿ ಮಾಡಿದ್ದಾನೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ಆತನನ್ನು ತಡೆಯಲು ಮುಂದಾಗಿದ್ದು, ಆತ ಕಾರಿನ ಮೇಲೆ ಕಲ್ಲನ್ನು ಎತ್ತಿ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತೆರಳಿದ್ದಾನೆ. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನು ಕೋರಮಂಗಲದ ಪಬ್​ ಒಂದರಲ್ಲಿ ಬೌನ್ಸರ್​ ಆಗಿ ಕೆಲಸ ಮಾಡುತ್ತಿದ್ದು, ಈತನ ಹೆಸರು ಅನಿಲ್​ ರೆಡ್ಡಿ ಎಂದು ತಿಳಿದು ಬಂದಿದೆ. ಬಂಧಿತನ ವಿರುದ್ಧ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − ten =
Remember me
