ಬೆಂಗಳೂರು: ಕೇರಳದಲ್ಲಿ ಕರೊನಾ ವಿರುದ್ಧದ ಹೋರಾಟದಲ್ಲಿ ಅಳವಡಿಸಿಕೊಂಡಿರುವ ಉತ್ತಮ ನಿಯಂತ್ರಣ ಮತ್ತು ಚಿಕಿತ್ಸಾ ಪದ್ಧತಿಗಳ ಬಗ್ಗೆ ಅಲ್ಲಿನ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರ ಜತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೋಮವಾರ ವಿಡಿಯೋ ಸಂವಾದ ನಡೆಸಿದರು.
ಸಂವಾದದಲ್ಲಿ ರೋಗದ ಪತ್ತೆ, ಪರೀಕ್ಷೆ, ಚಿಕಿತ್ಸೆಗೆ ಅಳವಡಿಸಿಕೊಂಡಿರುವ ಕ್ರಮಗಳು, ಅವುಗಳಿಂದ ಸಿಕ್ಕಿರುವ ಫಲಿತಾಂಶ, ಲಾಕ್​ಡೌನ್ ಸಡಿಲಿಕೆ ನಂತರ ಎದುರಾಗುವ ಸವಾಲು, ಕೈಗೊಳ್ಳಬೇಕಾದ ಮುನ್ನೇಚ್ಚರಿಕೆ ಕ್ರಮಗಳ ಕುರಿತು ವಿವರವಾಗಿ ರ್ಚಚಿಸಲಾಯಿತು. ಕರೊನಾ ನಿಯಂತ್ರಣಕ್ಕೆ ಬರುವವರೆಗೂ ನಿಯಮಿತವಾಗಿ ಸಂವಾದ ನಡೆಸುವ ಮೂಲಕ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಬಗ್ಗೆ ಮಾಹಿತಿ ವಿನಿಮಯಕ್ಕೆ ಇಬ್ಬರೂ ಸಚಿವರು ಸಹಮತ ವ್ಯಕ್ತಪಡಿಸಿದರು.
ಇದನ್ನೂ ಓದಿಮೇ 17ರ ನಂತರವೂ ಲಾಕ್​ಡೌನ್​ ವಿಸ್ತರಣೆ ಸುಳಿವು ನೀಡಿರುವ ಪ್ರಧಾನಿ
‘ಚೀನಾದ ವುಹಾನ್​ನಲ್ಲಿ ಸೋಂಕು ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಕೇರಳಕ್ಕೆ ಹಿಂತಿರುಗುತ್ತಿದ್ದಂತೆ ಎಚ್ಚರಿಕೆ ಕ್ರಮ ಕೈಗೊಳ್ಳಲಾಯಿತು. ಪಿಎಚ್​ಸಿ ಮತ್ತು ತಾಲೂಕು ಮಟ್ಟದಲ್ಲಿ ಬಲವಾದ ಆರೋಗ್ಯ ಸೇವೆ ಜಾಲ ಹೊಂದಿರುವುದರಿಂದ ಕೊರೋನಾ ಸೋಂಕಿತರನ್ನು ಮುಂಚಿತವಾಗಿ ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಲಾಯಿತು. ಪ್ರಾಥಮಿಕ ಮತ್ತು ದ್ವಿತೀಯ ಸೋಂಕಿತರನ್ನು ಪ್ರತ್ಯೇಕಿಸಿ ಕಟ್ಟುನಿಟ್ಟಾಗಿ ನಿಗಾವಹಿಸ ಲಾಯಿತು. ಇದು ಕೇರಳದಲ್ಲಿ ಮರಣ ಪ್ರಮಾಣ ಹೆಚ್ಚಾಗದಂತೆ ತಡೆಯಲು ಸಹಕಾರಿಯಾಯಿತು’ ಶೈಲಜಾ ಟೀಚರ್ ವಿವರಿಸಿದರು.
ಕಟ್ಟುನಿಟ್ಟಿನ ಕ್ರಮ: ಕರ್ನಾಟಕಕ್ಕೆ ಹೋಲಿಸಿದರೆ ಕೇರಳದಲ್ಲಿ ಜನಸಾಂದ್ರತೆ ವಿರಳ. ಸೋಂಕಿನ ಸರಪಳಿಯನ್ನು ತುಂಡರಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ಜತೆ, ಆಶಾ ಕಾರ್ಯಕರ್ತೆಯರು ನೆರವಾಗುತ್ತಿದ್ದಾರೆ. ಸಿಸಿಬಿ ಪೊಲೀಸರ ನೆರವನ್ನೂ ಪಡೆಯಲಾಗುತ್ತಿದೆ. ಸೋಂಕಿತರು ಹೆಚ್ಚಿನ ಜನರ ಸಂಪರ್ಕಕ್ಕೆ ಬಾರದಂತೆ ಕಠಿಣ ಕ್ರಮ ಕೈಗೊಂಡಿರುವುದು ಸಹ ಉತ್ತಮ ಫಲಿತಾಂಶ ನೀಡಿದೆ. ಲಾಕ್​ಡೌನ್ ಸಡಿಲಿಕೆ ನಂತರ ಹೊರರಾಜ್ಯ ಮತ್ತು ವಿದೇಶಗಳಿಂದ ಬಹು ದೊಡ್ಡ ಸಂಖ್ಯೆಯಲ್ಲಿ ಕೇರಳಿಗರು ಮರಳಲು ನೋಂದಣಿ ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಚೆನ್ನೈನಿಂದ ಆಗಮಿಸಿದ ಅನೇಕರು ಪಾಸಿಟಿವ್ ಆಗಿರುವುದು ನಮಗೆ ಆತಂಕದ ಸಂಗತಿಯಾಗಿದೆ ಎಂದರು.
ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸಲು ಆರಂಭಿಸಿದ ಬಳಿಕವಷ್ಟೇ ಸವಾಲು ಎದುರಾಗುತ್ತದೆ. ಈ ಹಂತದಲ್ಲಿ ಕರ್ನಾಟಕದಂತಹ ಉತ್ತಮ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಂಡಿರುವ ರಾಜ್ಯದ ಸಲಹೆ, ಸಹಕಾರ ಅಗತ್ಯವಿದೆ ಎಂದರು. ಸಂವಾದ ಸಂದರ್ಭದಲ್ಲಿ ಸಚಿವ ಸುಧಾಕರ್ ಅವರಿಂದ ಕರ್ನಾಟಕದಲ್ಲಿ ಅಳವಡಿಸಿಕೊಂಡಿರುವ ತಂತ್ರಜ್ಞಾನ ಮತ್ತು ತಜ್ಞರ ಆಧರಿತ ಚಿಕಿತ್ಸಾ ಕ್ರಮ, ಆರಂಭದಲ್ಲಿ ಎರಡರಷ್ಟಿದ್ದ ಲ್ಯಾಬ್​ಗಳ ಸಂಖ್ಯೆ ಇದೀಗ 35ಕ್ಕೆ ಏರಿಕೆಯಾಗಿರುವ ಮತ್ತು ದಿನವೊಂದಕ್ಕೆ ಐದೂವರೆ ಸಾವಿರ ಟೆಸ್ಟ್​ಗಳನ್ನು ಪ್ರತಿದಿನ ಮಾಡುತ್ತಿರುವ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿಶೀಘ್ರದಲ್ಲಿ ತಾಪ್ಸೀ ಪನ್ನು ಕಲ್ಯಾಣ! ಮದುವೆ ಗಂಡು ಯಾರು?
ಗರ್ಭಿಣಿ ಮತ್ತು ಹಿರಿಯ ನಾಗರಿಕರ ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್ ಮಾರ್ಗಸೂಚಿ ಮತ್ತು ಎದುರಾಗಿರುವ ಗೊಂದಲಗಳ ಬಗ್ಗೆಯೂ ಸಚಿವದ್ವಯರು ರ್ಚಚಿಸಿ, ಇಂತಹ ವಿಷಯಗಳ ಬಗ್ಗೆ ಏಕರೂಪದ ಚಿಕಿತ್ಸಾ ಕ್ರಮ ಅಳವಡಿಸಿಕೊಳ್ಳುವ ಬಗ್ಗೆ ಮಾರ್ಗಸೂಚಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಯಿತು.
ಕರೊನಾ ಸೋಂಕಿತರು ಮತ್ತು ಕುಟುಂಬ ಸದಸ್ಯರನ್ನು ಕಳಂಕಿತರಂತೆ ಕಾಣುವ ಮನೋಭಾವ ಸುಶಿಕ್ಷಿತರಲ್ಲೂ ಕಾಣುತ್ತಿದೆ. ಇದೊಂದು ಸಾಮಾಜಿಕ ಪಿಡುಗಿನಂತೆ ಕಾಣುವ ಮನೋಭಾವ ಕೆಲವರಲ್ಲಿದೆ. ಕೇರಳದ ಪರಿಸ್ಥಿತಿ ಏನು ಎಂಬ ಸುಧಾಕರ್ ಅವರ ಪ್ರಶ್ನೆಗೆ, ಕೇರಳದಲ್ಲೂ ಅದೇ ಸ್ಥಿತಿಯಿದೆ. ಸೋಂಕಿತರನ್ನು ಕ್ವಾರಂಟೈನ್ ಮಾಡುವುದಕ್ಕೆ ಸಂಬಂಧಿಸಿದಂತೆ ತಕರಾರು ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಾಧ್ಯಮಗಳ ಮೂಲಕ ಪ್ರತಿದಿನವೂ ಜನರಲ್ಲಿ ಅರಿವು ಮೂಡಿಸುವ ಯತ್ನ ನಡೆಸಿದ್ದಾರೆ’ ಎಂದು ಶೈಲಜಾ ಹೇಳಿದರು. ಸೋಂಕಿತರನ್ನು ಕ್ವಾರಂಟೈನ್​ಗೆ ಒಳಪಡಿಸುತ್ತಿರುವ ರೀತಿ, ಅವರನ್ನು ಟೆಸ್ಟ್ಗೆ ಒಳಪಡಿಸುತ್ತಿರುವುದು, ಉಸಿರಾಟ ಹಾಗೂ ಇತರೆ ಕಾಯಿಲೆಗಳಿರುವವರಿಗೆ ಔಷಧ ಉಪಚಾರ ನೀಡುತ್ತಿರುವುದು, ಖಾಸಗಿ ಮೆಡಿಕಲ್ ಕಾಲೇಜು ಮತ್ತು ವೈದ್ಯರ ಸಹಕಾರ, ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಳವಡಿಸಿಕೊಂಡಿರುವ ಕ್ರಮ, ಗರ್ಭಿಣಿಯರಿಗೆ ನೀಡುತ್ತಿರುವ ಚಿಕಿತ್ಸೆ, ವಿದೇಶಿ ಪ್ರಯಾಣಿಕರ ಆಗಮನದ ಬಳಕ ಅವರನ್ನು ಕ್ವಾರಂಟೈನ್​ಗೆ ಒಳಪಡಿಸುತ್ತಿರುವುದು ಸೇರಿ ಇತರೆ ಪ್ರಮುಖ ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.
ವಿಡಿಯೋ ಸಂವಾದದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಕುಲಪತಿ ಡಾ. ಸಚ್ಚಿದಾನಂದ, ಡಿಎಂಇ ಡಾ. ಗಿರೀಶ್, ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಮಂಜುನಾಥ್, ಕಿಮ್ಸ್ ನಿವೃತ್ತ ನಿರ್ದೇಶಕ ಡಾ. ಸುದರ್ಶನ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿಮುಂಬೈ, ಅಹಮದಾಬಾದ್​ನಿಂದ ರಾಜ್ಯದಲ್ಲಿ ಹೆಚ್ಚುತ್ತಿದೆ ಕರೊನಾ ಸೋಂಕು!
ಕುಕ್ಕೆಯ ಭೋಜನ ಪ್ರಸಾದ ಎಸೆದ ವಲಸೆ ಕಾರ್ಮಿಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
