ಬೆಂಗಳೂರು:ರಾಜ್ಯದ ಕೃಷಿ ಯೋಜನೆಗಳಿಗೆ ಸಹಕಾರ ನೀಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಮನವಿ ಮಾಡಿದರು.
ವಿವಿಧ ರಾಜ್ಯಗಳ ಕೃಷಿ ಸಚಿವರೊಂದಿಗೆ ಮುಂಗಾರು ಹಾಗೂ ಕೃಷಿ ಸಂಬಂಧಿಸಿದಂತೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಸಹಕಾರ ಕೋರಿದರು.
ಇದೇ ವೇಳೆ ಅವರು ರಾಜ್ಯದ ಮಳೆ, ಬೆಳೆ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಕರ್ನಾಟಕವು ದೇಶದ ದ್ವಿದಳ ಧಾನ್ಯ ಬೆಳೆಯ ಶೇ.11 ರಷ್ಟು ಭೂ ಪ್ರದೇಶ ಮತ್ತು ಶೇ.8 ರಷ್ಟು ಉತ್ಪಾದನೆ ಹೊಂದಿದೆ.
ರಾಜ್ಯದ 31.6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 19.83 ಲಕ್ಷ ಟನ್ ದ್ವಿದಳ ಧಾನ್ಯ ಬೆಳೆಯಲಾಗುತ್ತಿದೆ ಎಂದು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.ತೊಗರಿ ಬೇಳೆ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದ್ದು ಶೇ.31ರಷ್ಟು ಕೊಡುಗೆ ನೀಡುತ್ತಿದೆ ಎಂದು ವಿವರಿಸಿದರು.ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಎರಡನ್ನೂ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು ಇದರಿಂದ ಬೇಳೆ ಕಾಳುಗಳ ಆಮದು ಅವಲಂಬನೆ ತಪ್ಪಿಸಲು ಸಹಾಯಕವಾಗುತ್ತದೆ ಎಂದು ತಿಳಿಸಿದರು.
ಪ್ರಸಕ್ತ ವರ್ಷ ತೊಗರಿ ಬೇಳೆ ಉತ್ಪಾದನೆ ಪ್ರದೇಶವನ್ನು 2 ಲಕ್ಷ ಹೆಕ್ಟೇರ್‌ನಷ್ಟು ಹೆಚ್ಚಿಳ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.ರಾಜ್ಯದ 64.2 ಕೋಟಿ ರೂ. ಮೊತ್ತದ ತೊಗರಿ ಬೇಳೆ ಅಭಿವೃದ್ಧಿಯ ಹೆಚ್ಚುವರಿ ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ಕೃಷಿ ಸಚಿವರಿಗೆ ವಿಶೇಷ ಧನ್ಯವಾದ ಸಮರ್ಪಿಸಿದ ಚಲುವರಾಯಸ್ವಾಮಿ, ನಿರಂತರ ಸಹಕಾರಕ್ಕೆ ಮನವಿ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 9 =
Remember me
