ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇದರ ಮೂಲಕ ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ನೀರು ಹಂಚಿಕೆಯ ಯೋಜನೆಗೆ ಮೋದಿ ಮತ್ತು ಅಮಿತ್ ಷಾ ಒಪ್ಪಿಗೆ ಕೊಟ್ಟಿದ್ದಾರೆ. ಈ ಮೂಲಕ ಬಹಳ ವರ್ಷಗಳ ಬೇಡಿಕೆ ಈಡೇರಿದೆ. ಈ ಅಧಿಸೂಚನೆಯ ಮೂಲಕ ಆ ಭಾಗದ ಜನರಿಗೆ ಕುಡಿಯುವ ನೀರು ಮತ್ತು ನೀರಾವರಿಗೆ ಅನುಕೂಲ ಆಗುತ್ತದೆ. ಅಧಿಸೂಚನೆ ಹೊರಡಿಸಿರುವುದರಿಂದ 13.5 ಟಿಎಂಸಿ ನೀರು ಸಿಗುತ್ತದೆ ಎಂದರು.
ಈ ಸಲದ ಮುಂಗಡಪತ್ರದಲ್ಲಿ ಮಹದಾಯಿ ಯೋಜನೆಗೆ ಹೆಚ್ಚಿನ ಹಣ ಮೀಸಲು ಇಟ್ಟು ಆ ಭಾಗದ ಜನರಿಗೆ ಅನುಕೂಲ ಒದಗಿಸುವ ಕೆಲಸ ಮಾಡಲಾಗುತ್ತದೆ. ಆದಷ್ಟು ಬೇಗ ಈ ಕೆಲಸ ಆಗಲಿದೆ ಎಂದು ಸಿಎಂ ಭರವಸೆ ನೀಡಿದರು.
https://www.instagram.com/p/B9GtHGtHQJ4/?utm_source=ig_web_copy_link
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 10 =
Remember me
