ವಿಜಯಪುರ:ಈತ  ಕಾರನ್ನು ಕುಡಿದು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದ. ಅದರ ಪರಿಣಾಮವಾಗಿ ಅಪಘಾತವಾಗಿದ್ದು ಬೈಕ್​ ಹಾಗೂ ಆಟೋ ರಿಕ್ಷಾದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಇದರಿಂದ ಸಿಟ್ಟಿಗೆದ್ದ ಮಹಿಳೆಯೊಬ್ಬರು ಕಾರಿನ ಬಳಿ ತೆರಳಿ ಚಾಲಕನಿಗೆ ಹಿಗ್ಗಾ ಮುಗ್ಗಾ ಥಳಿಸಿ ನಶೆ ಇಳಿಸಿದ್ದಾರೆ!
ನಿನ್ನೆ ರಾತ್ರಿ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಮದ್ಯ ಸೇವಿಸಿ ನಶೆಯಲ್ಲಿದ್ದ ಕಾರು ಚಾಲಕ, ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಎರಡು ಅಟೋ ಹಾಗೂ ಒಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದ. ಈ ಘಟನೆಯಿಂದ ಒಂದು ಆಟೋ ಪಲ್ಟಿಯಾಗಿದ್ದು ಅದರಲ್ಲಿದ್ದ ಮಹಿಳೆ ಎದ್ದು ಬಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
ಮಹಿಳೆಯಿಂದ ಕಾರು ಚಾಲಕನ ಥಳಿತದ ವಿಡಿಯೊ ಇಂದು ವೈರಲ್ ಆಗಿದ್ದು ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
