ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಟಿ.ಎ.ಶರವಣ ಅವರನ್ನು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗು ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ನೇಮಕವನ್ನು ಮಾಡಲಾಗಿದೆ.. ಸಭೆಯ ನಂತರ ಟಿ. ಎ. ಶರವಣ ಅವರಿಗೆ ಕುಮಾರಸ್ವಾಮಿ ನೇಮಕದ ಆದೇಶ ಪ್ರತಿಯನ್ನು ನೀಡಿದರು.
ಕಳೆದ ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಶರವಣ ಅವರು ಈ ಹಿಂದೆ ಪಕ್ಷದ ವಕ್ತರರಾಗಿ ಸೇವೆ ಸಲ್ಲಿಸಿದ್ದರು. ದೇವೇಗೌಡರ ಕುಟುಂಬದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು ಪಕ್ಷದ ನಿಲುವನ್ನು ಸಮರ್ಥಿಸಿಕೊಳ್ಳುವ ಮೂಲಕ ವರಿಷ್ಠರ ಮೆಚ್ಚುಗೆ ಸಂಪಾದಿಸಿದ್ದು, ಇದೀಗ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five + seventeen =
Remember me
