ಬೆಂಗಳೂರು:ವಿಧಾನ ಪರಿಷತ್ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ, ಶೀಘ್ರದಲ್ಲಿಯೇ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಂಡು ಕ್ಷಿಪ್ರ ಕಾರ್ಯಾಚರಣೆ ನಡೆಸಲು ಮುಂದಾಗಿದೆ.
ಸಭಾಪತಿ ಸ್ಥಾನವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟು, ಉಪಸಭಾಪತಿ ಸ್ಥಾನವನ್ನು ಇಟ್ಟುಕೊಳ್ಳಲು ನಿರ್ಧರಿಸಿರುವ ಬಿಜೆಪಿ ನಾಯಕರು, ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನ ಪರಿಷತ್​ನಲ್ಲಿ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಬಗ್ಗೆ ತಡರಾತ್ರಿ ತನಕ ಚರ್ಚೆ ನಡೆದರೂ ಈ ಬಗ್ಗೆ ಯಾವುದೇ ಅಂತಿಮ ಅಭಿಪ್ರಾಯಕ್ಕೆ ಬರಲಾಗಲಿಲ್ಲ. ಕಾಂಗ್ರೆಸ್ ಪ್ರಭಾವಕ್ಕೆ ಸಭಾಪತಿ ಪೀಠವನ್ನು ಬಳಕೆ ಮಾಡುವುದು ಸರಿಯಲ್ಲ ಎಂದು ಕೋಟಾ ಶ್ರೀನಿವಾಸ ಪೂಜಾರಿ ಪರಿಷತ್​ನಲ್ಲಿಯೇ ಹರಿಹಾಯ್ದಿದ್ದರು. ಕಲಾಪ ಮುಗಿದ ಮೇಲೂ ಸಭಾಪತಿ ವಿಷಯದಲ್ಲಿ ಅಸಮಾಧಾನ ಮಡುಗಟ್ಟಿ ನಿಂತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ, ಹಲವಾರು ವಿಷಯಗಳಲ್ಲಿ ಕಾರ್ಯ ನಿರ್ವಹಣೆಗೆ ಮುಂದೆ ಅಡ್ಡಿಯಾಗಬಹುದು ಎನ್ನುವ ಹಿನ್ನೆಲೆಯಲ್ಲಿ ಈ ರಾಜಕೀಯ ಕಸರತ್ತು ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಶಾಲೆ ತೆರೆಯಲು ಶುರುವಾಗಿದೆ ಸಿದ್ಧತೆ; ಏನೆಲ್ಲ ನಿಯಮ ಪಾಲನೆಯಾಗಬೇಕು ಎಂದು ಹೇಳಿದ ಶಿಕ್ಷಣ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
