ಬೆಂಗಳೂರು:ವಿಧಾನಸೌಧದ ಮುಂಭಾಗ ಮಹಾನ್​​ ಮಾನವತವಾದಿ, ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಮತ್ತು ಬೆಂಗಳೂರು ಮಹಾನಗರ ನಿರ್ಮಾತೃ ಶ್ರೀ ಕೆಂಪೇಗೌಡರವರ ಪ್ರತಿಮೆಗಳನ್ನು ಪ್ರತಿಷ್ಠಾಪಿಸುವ ಸಂಬಂಧ ಇಂದು ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.
ಭೂಮಿ ಪೂಜೆ ನೆರವೇರಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಮಾತನಾಡಿ, ಜನರ ಶಕ್ತಿ ಕೇಂದ್ರವಾಗಿರುವ ವಿಧಾನಸೌದ ಮುಂದೆ ಕನ್ನಡ ನಾಡಿನಲ್ಲಿ ಹುಟ್ಟಿ ಕ್ರಾಂತಿ ಮಾಡಿದ ಇಬ್ಬರು ಮಹಾನ್ ನಾಯಕರ ಪ್ರತಿಮೆಗೆ ಶಂಕುಸ್ಥಾಪನೆ ಮಾಡಲಾಗಿದೆ ಎಂದರು.
ಇಬ್ಬರು ಮಹಾನ್​ ನಾಯಕರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ತಮಗೆ ಕೊಟ್ಟಂತಹ ಜವಾಬ್ದಾರಿಯನ್ನು ಸಚಿವ ಆರ್​. ಅಶೋಕ್​ ಅವರ ಅತ್ಯಂತ ಅಚ್ಚುಕಟ್ಟಾಗಿ ಮಾಡಿದ್ದಾರೆ. ಒಂದೂವರೆ ತಿಂಗಳಲ್ಲಿ ಈ ಪ್ರತಿಮೆಗಳನ್ನು ನಿರ್ಮಾಣ ಮಾಡಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲ ಪರಮಪೂಜ್ಯರ ಸಾನಿದ್ಯದಲ್ಲಿ ಶಂಕುಸ್ಥಾಪನೆ ಮಾಡಿದ್ದೇವೆ. ಈ ಮಹಾನ್ ವ್ಯಕ್ತಿಗಳ ಆಡಳಿತ, ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಕರ್ನಾಟಕ ಸಮಗ್ರ ಅಭಿವೃದ್ಧಿ ಆಗಿರುವಂತಹ ರಾಜ್ಯವಾಗಬೇಕು. ಈ ಇಬ್ಬರು ಮಹಾತ್ಮರ ಪ್ರೇರಣೆ, ವೈಚಾರಿಕ ವಿಚಾರ ನಿಲ್ಲಲಿ ಎಂಬುವ ಸಲುವಾಗಿ ಈ ಪ್ರತಿಮೆಗಳನ್ನು ಮಾಡಿದ್ದೇವೆ. ಈ ಮಹಾತ್ಮರ ಪ್ರೇರಣೆಯಿಂದ ಜನತೆಗೆ ಒಳ್ಳೆದಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿ, ಶ್ರೀ ಆದಿಚುಂಚನಗಿರಿ ಮಠದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು, ಮಾದರ ಚನ್ನಯ್ಯ, ನಂಜವಧೂತ ಸ್ವಾಮೀಜಿಗಳು, ಚಂದ್ರಶೇಖರ್ ಮಹಾ ಸ್ವಾಮೀಜಿ, ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗ್ಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಆರ್.ಅಶೋಕ್, ಎಸ್.ಟಿ ಸೋಮಶೇಖರ್, ಗೋವಿಂದ ಕಾರಜೋಳ ಸೇರಿದಂತೆ ಇತರ ಉಪಸ್ಥಿತರಿದ್ದರು.
ಕೇವಲ 12 ದಿನದಲ್ಲಿ 5.4 ಸೆಂ.ಮೀ ಕುಸಿದ ಜೋಶಿಮಠ: ಉಪಗ್ರಹ ಚಿತ್ರ ಬಿಡುಗಡೆ ಮಾಡಿದ ಇಸ್ರೋ

ಗಡಿ ಭಾಗದ ಗಾಂಜಾ ಗ್ಯಾಂಗ್​ಗಳಿಗೆ ನಿದ್ದೆ ಇಲ್ಲ! ಕೈಚಳಕ ತೋರಿಸಿದ ಬೀದರ್​ ಪೊಲೀಸರು…

ಕಳೆದ ತಿಂಗಳು ಹೊಸಪೇಟೆ ವಿದ್ಯಾರ್ಥಿಗಳ ಕೈಗೆ ಸಿಕ್ಕಿದ್ದ ಯುರೇಶಿನ್​ ಗ್ರಿಫನ್​ ವಲ್ಚರ್ ಮರಳಿ ಗೂಡಿಗೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fourteen =
Remember me
