
ಬೆಂಗಳೂರು:ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದಲ್ಲಿ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ.ಪಿಒಪಿ ಗಣೇಶನ ಬದಲು ಮಣ್ಣಿನ ಗಣಪತಿಯನ್ನೇ ಕೂರಿಸಿ ಚೌತಿ ಆಚರಿಸಿ, ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನಷ್ಟೇ ಸಿಡಿಸಿ ಸಂಭ್ರಮಿಸಿ ಎಂದು ಸರ್ಕಾರ ಪ್ರತಿ ವರ್ಷ ಆದೇಶ ಹೊರಡಿಸುತ್ತಿದೆ. ಈ ನಡುವೆ ದಸರಾ ಹಿನ್ನೆಲೆಯಲ್ಲಿ ಸರ್ಕಾರ ಇನ್ನೊಂದು ಆದೇಶ ಹೊರಡಿಸಿದ್ದು, ಅರಿಶಿನ-ಕುಂಕುಮ ಇತ್ಯಾದಿ ಬಳಸದೆ ಆಯುಧ ಪೂಜೆ ಮಾಡುವಂತೆ ಸೂಚನೆ ನೀಡಿದೆ.ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ಸಮಯದಲ್ಲಿ ಕಚೇರಿಗಳ ಒಳಗೆ ಮತ್ತು ಕಾರಿಡಾರ್‌ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸುವುದರಿಂದ ಹಾನಿಕಾರಕ ಬಣ್ಣವು ನೆಲಹಾಸಿನ ಮೇಲೆ ಬಿದ್ದು, ಸುಮಾರು ತಿಂಗಳುಗಳ ಕಾಲ ಹಾಗೆಯೇ ಅಂಟಿಕೊಂಡು ಉಳಿಯುತ್ತದೆ. ಇದರಿಂದ ಕಟ್ಟಡದ ನೆಲಹಾಸುಗಳ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಈ ಬಗ್ಗೆ ಹಿಂದೆಯೂ ಅನೇಕ ಸುತ್ತೋಲೆಗಳನ್ನು ಹೊರಡಿಸಿದ್ದಾಗ್ಯೂ ಕೆಲವು ಇಲಾಖೆಯವರು ಈ ಸೂಚನೆಗಳನ್ನು ಪಾಲನೆ ಮಾಡದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಇನ್ನೊಮ್ಮೆ ಈ ಆದೇಶ ಹೊರಡಿಸಿದ್ದಾಗಿ ತಿಳಿಸಿದೆ.ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ಆಯುಧಪೂಜೆ ವೇಳೆ ಕಛೇರಿ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣ/ಕುಂಕುಮ/ಅರಿಶಿನ/ಸುಣ್ಣ ಹಾಗೂ ಇನ್ನಿತರ ವಸ್ತುಗಳನ್ನು ಕಡ್ಡಾಯವಾಗಿ ಬಳಸದಂತೆ ಸೂಚಿಸಲಾಗಿದೆ.ಪೂಜಾ ದಿನದಂದು ಕಚೇರಿಯಿಂದ ಹೊರಡುವ ಮುನ್ನ ದೀಪಗಳನ್ನು ಹಾಗೂ ವಿದ್ಯುತ್ ಸ್ವಿಚ್‌ಗಳನ್ನು ನಂದಿಸಿ ತೆರಳುವಂತೆ ಸೂಚಿಸಲಾಗಿದೆ. ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ವ್ಯವಸ್ಥಿತವಾಗಿ ವಿಲೇವಾರಿ ಮಾಡತಕ್ಕದ್ದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
