ಬೆಂಗಳೂರು:ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೋ ಪ್ರಕರಣ ಕರಾವಳಿ ಜಿಲ್ಲೆಯಲ್ಲಿ ಹೊತ್ತಿ ಉರಿಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.ಆ.1 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ನೆರೆ, ಪ್ರವಾಹ ಪರಿಸ್ಥಿತಿಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಅದಕ್ಕೂ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ವಿವಾದಗಳ ಮೇಲೆ ವಿವಾದಗಳು ಸೃಷ್ಟಿಯಾಗಿ ಶಾಂತಿ ಸುವ್ಯವಸ್ಥೆಯನ್ನು ಭಂಗಗೊಳಿಸುವ ಯತ್ನಗಳು ನಡೆದಿವೆ. ಇದರಿಂದ ಸರ್ವಜನಾಂಗದ ಶಾಂತಿಯ ತೋಟದ ಆಶಯಗಳಿಗೆ ಧಕ್ಕೆ ಒದಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಹತ್ವ ಪಡೆದುಕೊಂಡಿದೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ಪೂರ್ವ ನಿಯೋಜಿತವಾಗಿದ್ದರೂ ಉಡುಪಿ ಕಾಲೇಜು ವಿಡಿಯೋ ಪ್ರಕರಣ ದಿನೇ ದಿನೆ ಹೊಸ ಹೊಸ ತಿರುವ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಬಿಜೆಪಿಯ ಸ್ಥಳೀಯ ಪ್ರತಿನಿಗಳು ವಿಡಿಯೋ ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಗದ್ದಲ, ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಮೂಲಕ ಸರ್ಕಾರದ ವೈಫಲ್ಯ ಮತ್ತು ಕಾಂಗ್ರೆಸ್‌ನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನಗಳು ನಡೆದಿವೆ. ಹೀಗಾಗಿ ವಿಡಿಯೋ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ.
ಲೋಕಸಭೆ ಚುನಾವಣೆ ಸಮೀಪಿಸಿರುವುದರಿಂದ ಬಿಜೆಪಿ ವಿಡಿಯೋ ಪ್ರಕರಣವನ್ನು ಮುನ್ನೆಲೆಗೆ ತಂದಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಈಗಾಗಲೇ ಸರ್ಕಾರ ಸರ್ಕಸ್ ಮಾಡುತ್ತಿದೆ. ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಆ.1 ರಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಉಡುಪಿ, ದ.ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ವಿಡಿಯೋ ಪ್ರಕರಣ, ಕಾನೂನು ಸುವ್ಯವಸ್ಥೆ ಕೂಡ ಚರ್ಚೆಯ ಪ್ರಮುಖ ವಸ್ತುಗಳಾಗಲಿವೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
