ಬೆಂಗಳೂರು:ಕರೊನಾ ಸಂದರ್ಭದಲ್ಲೂ ಮಕ್ಕಳ ಕಲಿಕೆಗೆ ತೊಡಕಾಗಬಾರದೆಂಬ ಕಾರಣಕ್ಕೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಕಲಿಸುವ ‘ವಿದ್ಯಾಗಮ’ ನಿರಂತರ ಕಲಿಕಾ ಯೋಜನೆ ಜಾರಿಗೆ ತರಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ಎಲ್ಲ ಮಕ್ಕಳಿಗೂ ತಂತ್ರಜ್ಞಾನ ಆಧಾರಿತ ಶಿಕ್ಷಣ ದೊರೆಯುವಂತೆ ಮಾಡುವುದು ಮತ್ತು ಶಿಕ್ಷಕರು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವ ಮೂಲಕ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸುವುದು ವಿದ್ಯಾಗಮ ಯೋಜನೆಯ ಉದ್ದೇಶ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಗ್ರಾಮ, ನಗರ, ಪಟ್ಟಣ, ಗುಡ್ಡಗಾಡು, ಹಳ್ಳಿಗಾಡು ಪ್ರದೇಶ, ಬೆಟ್ಟ, ಅರಣ್ಯದಂಚಿನ ಗ್ರಾಮಗಳ ಮಕ್ಕಳಿದ್ದಾರೆ. ಕೆಲ ಮಕ್ಕಳಿಗೆ ಟಿವಿ, ಫೋನ್ ಸೌಲಭ್ಯವೂ ಇರಲ್ಲ. ಆದ್ದರಿಂದ ಎಲ್ಲ ಮಕ್ಕಳ ಕಲಿಕೆ ನಿರಂತರ ಆಗಿರುವಂತೆ ನೋಡಿಕೊಳ್ಳುವುದಕ್ಕಾಗಿ ಎಂ.ಕೆ. ಶ್ರೀಧರ್ ನೇತೃತ್ವದ ಸಮಿತಿ ವರದಿ ಆಧಾರದಲ್ಲಿ ವಿದ್ಯಾಗಮ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸ್ವಯಂ ಸೇವಕರ ನೇಮಕ: ಪ್ರತಿ ನೆರೆಹೊರೆ ಗುಂಪಿಗೆ ಆ ಪ್ರದೇಶದಲ್ಲಿ ವಾಸಿಸುವ ವಿದ್ಯಾವಂತ ಯುವಕ/ಯುವತಿಯರನ್ನು ಗುರುತಿಸಿ ಸ್ವಯಂಸೇವಕರನ್ನಾಗಿ ನೇಮಿಸಲಾಗುವುದು. ಸದರಿ ಸ್ವಯಂಸೇವಕರು ಮಾರ್ಗದರ್ಶಿ ಶಿಕ್ಷಕರ ಮೇಲ್ವಿಚಾರಣೆಯಲ್ಲಿ ನೆರೆಹೊರೆ ಗುಂಪಿನ ಮಕ್ಕಳಿಗೆ ಪಾಠ ಪ್ರವಚನ ಕೈಗೊಳ್ಳಲಿದ್ದು, ತಮ್ಮ ವ್ಯಾಪ್ತಿಯಲ್ಲಿರುವ ಸ್ವಯಂಸೇವಾ ಸಂಸ್ಥೆಗಳ ಸಹಕಾರವನ್ನೂ ಸಹಾಯ ಪಡೆಯಲಾಗುತ್ತದೆ.
ಸಂವೇದ ಕಾರ್ಯಕ್ರಮ: ಶೇ.90ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳ ಮನೆಗಳಲ್ಲಿ ಟಿ.ವಿ. ಇರುವುದರಿಂದ, ‘ಸಂವೇದ’ ಟಿ.ವಿ. ಆಧಾರಿತ ಕಲಿಕಾ ಕಾರ್ಯಕ್ರಮವನ್ನು ‘ವಿದ್ಯಾಗಮ’ ಕಾರ್ಯಕ್ರಮದ ಅಂಗವಾಗಿ ರೂಪಿಸಲಾಗಿದೆ. ಯು-ಟ್ಯೂಬ್ ತರಗತಿಗಳು 1ರಿಂದ 10ನೇ ತರಗತಿಯವರೆಗೆ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಪಾಠಗಳನ್ನು ಪರಿಣತ ಶಿಕ್ಷಕರ ಬೋಧನೆಯ ವಿಡಿಯೋ ತಯಾರಿಸಿ ಯು-ಟ್ಯೂಬ್ ಚಾನೆಲ್ ‘ಮಕ್ಕಳ ವಾಣಿ’ಯಲ್ಲೂ ಅಪ್​ಲೋಡ್ ಮಾಡಲಾಗುವುದು.
ಪ್ರಮುಖಾಂಶ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
