ಬೆಂಗಳೂರು:ರಾಜ್ಯದಲ್ಲಿ 4.40 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದ್ದು, ವಸತಿ ಯೋಜನೆಗಳಲ್ಲಿ ಅಕ್ರಮ ತಡೆಯಲು ವಿಜಿಲ್ ಮೊಬೈಲ್ ಆಪ್ ಅನುಷ್ಠಾನಗೊಳಿಸಲಾಗಿದೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದ್ದಾರೆ.
ಬೋಗಸ್ ಫಲಾನುಭವಿಗಳನ್ನು ಪತ್ತೆಹಚ್ಚಿ, ಅನುದಾನ ದುರುಪಯೋಗ ತಡೆಯುವ ಮೂಲಕ ಇಲಾಖೆಯಲ್ಲಿ ಇನ್ನಷ್ಟು ಪಾರದರ್ಶಕತೆ ತರಲು ವಿಜಿಲ್ ಆಪ್ ನೆರವಾಗಲಿದೆ. ಹಳೇ ಯೋಜನೆಗಳಿಂದ 9 ಲಕ್ಷ ಫಲಾನುಭವಿಗಳಿಗೆ ಮನೆ ಕೊಡಬೇಕಾಗಿದೆ ಎನ್ನುವ ಮಾಹಿತಿ ನೀಡಲಾಗಿತ್ತು. ಬೋಗಸ್ ಫಲಾನುಭವಿಗಳನ್ನು ಪತ್ತೆಹಚ್ಚಿದ ಮೇಲೆ 4.37 ಲಕ್ಷ ಫಲಾನುಭವಿಗಳು ಉಳಿದಿದ್ದಾರೆ. ಅವರೆಲ್ಲರಿಗೆ ಡಿಸೆಂಬರ್ ಅಂತ್ಯ ದೊಳಗೆ ಮನೆ ನಿರ್ವಿುಸಿ ಕೊಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗ್ರಾಮೀಣ ಭಾಗದ ಜನರಿಗೆ ರಾಜೀವ್ ಗಾಂಧಿ ಆವಾಸ್ ಯೋಜನೆಯಿಂದ 6 ಲಕ್ಷ ಮನೆಗಳ ನಿರ್ವಣಕ್ಕೆ ಮುಂದಾಗಿದ್ದೇವೆ ಎಂದರು.
ಬಹುಮಹಡಿ ಕಟ್ಟಡ ಇಲ್ಲ:ಇನ್ನು ಮುಂದೆ ಬಹುಮಹಡಿ ವಸತಿ ಕಟ್ಟಡಗಳನ್ನು ನಿರ್ಮಾಣ ಮಾಡುವುದಿಲ್ಲ. ಜಿ ಪ್ಲಸ್ 3 ಹಂತದ ಕಟ್ಟಡ ಮಾತ್ರ ನಿರ್ಮಾಣ ಮಾಡಲಾಗುವುದು ಎಂದರು. 1.20 ಲಕ್ಷ ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ವಣಕ್ಕಾಗಿ 800 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸೋಮಣ್ಣ ಹೇಳಿದರು.
ಎಲ್ಲಿ ತನಕ ಇರ್ತಿನೋ ಗೊತ್ತಿಲ್ಲ
ನಾನು ಎಲ್ಲಿಯ ತನಕ ಇರ್ತಿನೋ ಏನೋ ಗೊತ್ತಿಲ್ಲ. ರಾಜಕೀಯದ ಕೊನೆಯ ಘಟ್ಟದಲ್ಲಿ ಇದ್ದೇವೆ. ಇದ್ದ ಅವಧಿಯಲ್ಲಿ ಉತ್ತಮ ಕೆಲಸ ಮಾಡಬೇಕು ಎನ್ನುವ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಸೋಮಣ್ಣ ಮಾರ್ವಿುಕವಾಗಿ ಹೇಳಿದರು. ಸಂಪುಟ ವಿಸ್ತರಣೆ ಬಗ್ಗೆ ದೇವರಾಣೆ ನನಗಂತೂ ಗೊತ್ತಿಲ್ಲ. ಈ ಬಗ್ಗೆ ಸಿಎಂ ಕೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
