ಬೆಂಗಳೂರು:ರೇಣುಕಾ ಸ್ವಾಮಿ ಎನ್ನುವ ವ್ಯಕ್ತಿಯೊರ್ವನ  ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ  ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ದರ್ಶನ್  ಹಾಗೂ ಅವರ ಸಹಚರರು ಇದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ  ಪತಿ ಅರೆಸ್ಟ್​ ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್​ಸ್ಟಾಗ್ರಾಮ್​ ಪ್ರೊಫೈಲ್‌​ ಫೋಟೋ ಡಿಲೀಟ್ ಮಾಡಿ  ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದರು. ಆದರೆ ಈ ಎಲ್ಲಾ ವಿಚಾರಗಳಿಂದ ಮನನೊಂದು ದರ್ಶನ್​​ ಅವರ ಪತ್ನಿ ಸೋಶಿಯಲ್​ ಮೀಡಿಯಾಗೆ ಗುಡ್​ ಬೈ ಹೇಳಿದ್ದರು. ಆದರೆ ಇದೀಗ ಮತ್ತೆ ಸೋಶಿಯಲ್​​ ಮೀಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.
ವಿಜಯಲಕ್ಷ್ಮಿ ಅವರು ತಮ್ಮ ಹಳೆ ಖಾತೆಯನ್ನೇ ಮತ್ತೆ ಸಕ್ರಿಯಗೊಳಿಸಿದ್ದಾರೆ. ಆದರೆ ತಾವು ಮಾಡಿದ್ದ ಎಲ್ಲ ಪೋಸ್ಟ್​ಗಳನ್ನು ಡಿಲೀಟ್ ಮಾಡಿದ್ದಾರೆ. ಫಾಲೋ ಮಾಡುತ್ತಿದ್ದವರನ್ನು ಸಹ ಅನ್​ಫಾಲೋ ಮಾಡಿದ್ದಾರೆ. ಮತ್ತೆ ಸಕ್ರಿಯಗೊಳಿಸದಮೇಲೆ ಹಳೆಯ ಹೆಸರನ್ನೇ ಮುಂದುವರೆಸಿದ್ದಾರೆ. ಖಾತೆ ಹೆಸರು ‘ವಿಜಿ ದರ್ಶನ್’ ಎಂದೇ ಇದೆ. ಬಯೋನಲ್ಲಿ ವಿಜಯಲಕ್ಷ್ಮಿ ದರ್ಶನ್ ಎಂದಿದೆ. ಆದರೆ ಪ್ರೊಫೈಲ್ ಚಿತ್ರ, ಮಾಡಲಾಗಿದ್ದ ಪೋಸ್ಟ್​ಗಳೆಲ್ಲವನ್ನೂ ಸಹ ವಿಜಯಲಕ್ಷ್ಮಿ ಡಿಲೀಟ್ ಮಾಡಿದ್ದಾರೆ.
ದರ್ಶನ್ ಅವರ ಜಾಮೀನಿನಾಗಿ ಅವರ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿರುವ ವಕೀಲರಾದ ರಂಗನಾಥ ರೆಡ್ಡಿ ಮತ್ತು ಅನಿಲ್ ಬಾಬು ಅವರನ್ನು ವಿಜಯಲಕ್ಷ್ಮಿ ಅವರೇ ನೇಮಿಸಿದ್ದು, ಈ ವಕೀಲರು ವಕಾಲತ್ತು ವಹಿಸಿರುವುದು ಸಹ ವಿಜಯಲಕ್ಷ್ಮಿ ಮತ್ತು ಅವರ ತಂದೆ-ತಾಯಿಯ ಮೂಲಕವೇ ಎನ್ನಲಾಗಿದೆ.
ವಿಜಯಲಕ್ಷ್ಮಿ ಹಾಗೂ ದರ್ಶನ್ ಅವರು ಪ್ರೀತಿಸಿ 2003 ರಲ್ಲಿ ವಿವಾಹವಾದರು. ಇವರಿಗೆ ಒಬ್ಬ ಮಗನಿದ್ದಾನೆ. ಈ ಹಿಂದೆ 2011 ರಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದರು. ವಿಜಯಲಕ್ಷ್ಮಿಯ ಮುಖ, ಕೈಗೆ ತೀವ್ರ ಪೆಟ್ಟಾಗಿತ್ತು. ಆಗ ವಿಜಯಲಕ್ಷ್ಮಿ ಅವರೇ ದೂರು ಹಿಂಪಡೆದು ನ್ಯಾಯಾಲಯದ ಹೊರಗೆ ಸಂಧಾನ ಮಾಡಿಕೊಂಡು ಸಂಸಾರ ಮುಂದುವರೆಸಿದ್ದರು. ಬಳಿಕ ದರ್ಶನ್, ಪವಿತ್ರಾ ಗೌಡ ಮೋಹಕ್ಕೆ ಸಿಲುಕಿದರು.
ದರ್ಶನ್ ಪತ್ನಿ ವಿಜಯಲಕ್ಷ್ಮಿ ತುಂಬಾ ಬೇಸರವಾಗಿದ್ದರು. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಇನ್‌ಸ್ಟಾ ಖಾತೆಯನ್ನು ಡಿ- ಆಕ್ಟಿವೇಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಹೆಸರು ಕೇಳಿ ಬರುತ್ತಿದ್ದಂತೆ ಇನ್‌ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಅನ್‌ಫಾಲೋ ಮಾಡಿದ್ದರು. ಅಲ್ಲದೇ ದರ್ಶನ್ ಫ್ಯಾನ್ ಪೇಜ್ ಅನ್ನು ಅನ್‌ಫಾಲೋ ಮಾಡಿ ಇನ್‌ಸ್ಟಾಗೆ ಇದ್ದ ಡಿಪಿ ಫೋಟೋವನ್ನು ತೆಗೆದು ಹಾಕಿದ್ದರು. ಇದರಿಂದ ಇನ್‌ಸ್ಟಾ ಖಾತೆಯ ಡಿಪಿ ಬ್ಲಾಂಕ್‌ನಲ್ಲಿತ್ತು. ಸದ್ಯ ಈ ಎಲ್ಲದರ ಬೆನ್ನಲ್ಲೇ ಇದೀಗ ತಮ್ಮ ಇನ್​ಸ್ಟಾಗ್ರಾಮ್​​ ಖಾತೆಯನ್ನು ವಿಜಯಲಕ್ಷ್ಮಿ ಅವರು ಡಿ-ಆ್ಯಕ್ಟಿವೇಟ್ ಮಾಡಿದ್ದರು.
ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.  ದರ್ಶನ್​ ಕೊಲೆ ಆರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ.
ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್​ನ ಫಾಲೋ ಮಾಡುತ್ತಿದ್ದರು.  ಸೋಶಿಯಲ್ ಮೀಡಿಯಾಗೆ ಗುಡ್​ ಬೈ ಹೇಳಿದ್ದು ಚರ್ಚೆ ನಡೆಯುತ್ತಿತ್ತು. ಈ ಬೆನ್ನಲ್ಲೆ ಮತ್ತೆ  ಸೋಶಿಯಲ್​​ ಮೀಡಿಯಾಗೆ ಎಂಟ್ರಿಕೊಟ್ಟಿದ್ದಾರೆ.
ದರ್ಶನ್‌ ಮೇಲೆ ಸಿಟ್ಟು, ಸೋಶಿಯಲ್​ ಮೀಡಿಯಾಗೆ ಗುಡ್​ಬೈ ಹೇಳಿದ ವಿಜಯಲಕ್ಷ್ಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
