ವಿಜಯನಗರ : ಟಿಪ್ಪರ್ಮತ್ತು ಕ್ರೂಸರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆ ನಗರದ ಹೊರವಲಯದ ಟನಲ್ ಬಳಿ ಟಿಪ್ಪರ್, ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಅಪಘಾತಕ್ಕಿಡಾಗಿದೆ. ಈ ಅಪಘಾತದಲ್ಲಿ ಸಿಲುಕಿರುವ ಶವಗಳನ್ನು ಹೊರ ತೆಗೆಯಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ಕ್ರೂಸರ್‌ ವಾಹನವು ಪೂರ್ತಿ ಛಿದ್ರ ಛಿದ್ರಗೊಂಡಿದೆ.ಟಿಪ್ಪರ್ ಮುಂಭಾಗ ಪೂರ್ತಿ ಜಖಂಗೊಂಡಿದೆ.
ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ದುರ್ಘಟನೆ ನಡೆದಿದೆ‌. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತದೇಹವನ್ನು ಹೊರತೆಗೆಯುತ್ತಿದ್ದಾರೆ.
ಕ್ರಿಕೆಟ್‌ ವಿಶ್ವಕಪ್‌ ನಿರೂಪಣೆಗಾಗಿ ಬಂದಿದ್ದ ಪಾಕ್‌ ಸುಂದರಿ ಭಾರತದಿಂದ ಗಡಿಪಾರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
