ವಿಜಯನಗರ:ಕಾಂಗ್ರೆಸ್ ಸಭೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಬಳ್ಳಾರಿ-ವಿಜಯನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ನಡೆದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾನಭಂಗ ಹಾಗೂ ಜಾತಿನಿಂದನೆ ಮಾಡಿದ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರನ್ನು ಹೊಸಪೇಟೆ ತಾಲೂಕು ಮಹಿಳಾ ಬ್ಲಾಕ್ ಅಧ್ಯಕ್ಷೆ ಯೋಗಲಕ್ಷ್ಮೀ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ.
ಮಲ್ಲಿಗೆ ಹೋಟೆಲ್‌ನಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಪಕ್ಷದ ಪ್ರಮುಖರ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಗಲಾಟೆಯ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಡಿದಾಟವು ಆಗಿತ್ತು. ಕಲ್ಯಾಣ ಕರ್ನಾಟಕ ಸಂಘಟನಾ ಕಾರ್ಯದರ್ಶಿ ಶಿಲ್ಪಾ ಎಂಬುವವರೊಂದಿಗೆ ಜಗಳ ತೆಗೆದಿದ್ದ ಯೋಗ ಲಕ್ಷ್ಮೀ ಮತ್ತು ಸಂದೀಪ್ ಅವಾಚ್ಯ ಪದಗಳನ್ನು ಬಳಸಿ, ಜಾತಿ ನಿಂದನೆ ಮಾಡಿದ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಲೈಂಗಿಕ ಸುಖದ ನಷ್ಟ ಅನುಭವಿಸಿದ್ದೇನೆ! 10 ಸಾವಿರ ಕೋಟಿ ರೂ. ಪರಿಹಾರ ಕೋರಿ ಕೋರ್ಟ್​ ಮೆಟ್ಟಿಲೇರಿದ ವ್ಯಕ್ತಿ

ಬೆಳಗಾವಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಪಿಕ್​ ಅಪ್​ ವಾಹನ: 6 ಮಂದಿ ದುರಂತ ಸಾವು

ಪದವಿ ವಿದ್ಯಾರ್ಥಿಗಳಿಗೆ ಇನ್ನೂ ಸಿಗದ ಟ್ಯಾಬ್…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 6 =
Remember me
