ವಿಜಯನಗರ:ಕಾಲೇಜಿನ ಬಳಿ ಬಸ್​ ನಿಲ್ಲಿಸದಿದ್ದಕ್ಕೆ ಬಸ್​ನಿಂದ ಹೊರಗೆ ಜಿಗಿದ್ದಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಶ್ವೇತಾ ಎಂದು ಗುರುತಿಸಲಾಗಿದೆ. ಶ್ವೇತಾ ಹೂವಿನಹಡಗಲಿಯ ಸರ್ಕಾರಿ ಇಂಜನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್​ ಮತ್ತು ಕಮ್ಯೂನಿಕೇಷನ್​ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು.
ಕಾಲೇಜು ಬಳಿಯ ಬಸ್​ ನಿಲ್ದಾಣದಲ್ಲಿ ಬಸ್ ನಿಲ್ಲಿಸದಿದ್ದಕ್ಕೆ ಶ್ವೇತಾ ಬಸ್​ನಿಂದ ಜಿಗಿದಿದ್ದಳು. ನಿನ್ನೆ (ಏ.12) ಮಧ್ಯಾಹ್ನ ಹಡಗಲಿಯಿಂದ ರಾಣೆಬೆನ್ನೂರಿಗೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್​ನಲ್ಲಿ ಘಟನೆ ನಡೆದಿತ್ತು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ವೇತಾ ಮೃತಪಟ್ಟಿದ್ದಾಳೆ.
ಇದನ್ನೂ ಓದಿ:ಗಂಡನ ಜತೆ ರಸ್ತೆ ಪಕ್ಕದಲ್ಲಿ ತೆರಳುವಾಗ ಆಟೋ ಡಿಕ್ಕಿ: ಗರ್ಭಿಣಿ ದುರಂತ ಸಾವು, ಅಂಕೋಲದಲ್ಲಿ ದುರ್ಘಟನೆ
ಹಡಗಲಿ ಪಟ್ಟಣದ ಬಿಸಿಎಂ ಹಾಸ್ಟೆಲ್​ ಶ್ವೇತಾ ವಾಸವಿದ್ದಳು. ಶ್ವೇತಾಳ ಸಾವಿನಿಂದ ವಿದ್ಯಾರ್ಥಿಗಳು ರೊಚ್ಚಿಗೆದ್ದಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಹಡಗಲಿ ಪೊಲೀಸರ ಭೇಟಿ ನೀಡಿ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದ್ದಾರೆ.
ಘಟನೆ ಬಳಿಕ ಸಾರಿಗೆ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೂವಿನಹಡಗಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.(ದಿಗ್ವಿಜಯ ನ್ಯೂಸ್​)
ಗಟ್ಟಿಯಾಗಿ ತಬ್ಬಿ ಗುಪ್ತಾಂಗವನ್ನು ಮುಟ್ಟಿದ: ಡ್ರೆಸ್ಸಿಂಗ್​ ರೂಮಲ್ಲಿ ನಡೆದ ಕರಾಳ ಘಟನೆ ಬಿಚ್ಚಿಟ್ಟ ನಟಿ ಮಾಳವಿಕಾ

ಅಂದುಕೊಂಡಿದ್ದನ್ನು ಮಾಡುತ್ತೇನೆ ಅಂತ ಬೆತ್ತಲೆ ಫೋಟೋ ಶೇರ್​ ಮಾಡಿದ ಜೇಮ್ಸ್​ ಬಾಂಡ್​ ನಟಿ!

ಠೇವಣಿ ಕಳೆದುಕೊಂಡಿದ್ದ ಮುಂಗಾರು ಮಳೆ ಬೆಡಗಿ ಪೂಜಾ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
