ವಿಜಯನಗರ:ಕರೊನಾ ವೈರಸ್​ ನಂತರದ ಕಾಲದಲ್ಲಿ ಹೃದಯಾಘಾತ ಹಾಗೂ ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ತೀವ್ರ ಆತಂಕವನ್ನು ಸೃಷ್ಟಿ ಮಾಡಿದೆ. ಪ್ರತಿನಿತ್ಯ ಒಂದಲ್ಲ ಒಂದು ಕಡೆ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕಾರಣ ಏನು ಎಂಬುದು ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ.
ಇದೀಗ ಹೃದಯಾಘಾತಕ್ಕೆ ಪೊಲೀಸ್ ಸಿಬ್ಬಂದಿಯೊಬ್ಬರು ಬಲಿಯಾಗಿದ್ದಾರೆ. ನಿನ್ನೆ ತಡರಾತ್ರಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಪೊಲೀಸ್​ ಕಾನ್ಸ್​ಟೆಬಲ್​ ರಾಘವೇಂದ್ರ ಎಂದು ಗುರುತಿಸಲಾಗಿದೆ.
ರಾಘವೇಂದ್ರ ಅವರು 2005ರಲ್ಲಿ ಪೊಲೀಸ್​ ಕಾನ್ಸ್​ಟೇಬಲ್​ ಆಗಿ ನೇಮಕವಾದರು. ಕಳೆದ 18 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇತ್ತೀಚಿಗಷ್ಟೇ ಬಳ್ಳಾರಿಯ ಲೋಕಾಯುಕ್ತ ಕಚೇರಿಯಿಂದ ಕಮಲಾಪುರ ಠಾಣೆಗೆ ವರ್ಗಾವಣೆ ಆಗಿದ್ದರು. ಹೆಡ್ ಕಾನ್ಸ್​ಟೆಬಲ್ ಆಗಿ ಬಡ್ತಿ ಪಡೆದು ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ:1 ಮಿಲಿಯನ್​ ಫಾಲೋವರ್ಸ್​ಗೆ ಬಿಕಿನಿ ವಿಡಿಯೋ ಗಿಫ್ಟ್​ ಅಂತೆ! ನೆಟ್ಟಿಗರಿಗೆ ಹೆದರಿ ಸೋನು ಏನು ಮಾಡಿದ್ದಾರೆ ನೋಡಿ…
ವಿಜಯನಗರದ ಪೊಲೀಸ್​ ವರಿಷ್ಠಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಡಿವೈಎಸ್​ಪಿ ಮಂಜುನಾಥ್ ತಳವಾರ್, ಹಂಪಿ ಸಿಪಿಐ ಕೆ. ಶಿವರಾಜ್ ಅವರು ರಾಘವೇಂದ್ರ ಅವರ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಮೃತ ರಾಘವೇಂದ್ರ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕುಟುಂಬದ ಆಧಾರಸ್ತಂಭವನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
ಇಂದಿನಿಂದ ಚೀನಾ ಓಪನ್ ಸೂಪರ್-1000 ಬ್ಯಾಡ್ಮಿಂಟನ್ ಟೂರ್ನಿ, ಸಿಂಧು ಗೈರು

ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ: 35 IPS​ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನ ಬಹುತೇಕರಿಗೆ ಗೇಟ್​ಪಾಸ್

ಯುಎಸ್ ಓಪನ್ ಗ್ರಾಂಡ್ ಸ್ಲಾಂ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಇಗಾ ಸ್ವಿಯಾಟೆಕ್‌ಗೆ ಶಾಕ್ ನೀಡಿದ ಒಸ್ತಾಪೆಂಕೊ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:3 − two =
Remember me
