ಬೆಂಗಳೂರು:ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರದ ಮಂತ್ರಿ ಮಂಡಲ ರಚನೆಯಲ್ಲಿ ಹಲವರಿಗೆ ಅವಕಾಶ ನೀಡದಿರುವ ಕುರಿತು ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ.
ಇನ್ನು ತಮಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್​ ಪ್ರತಿಕ್ರಿಯಿಸಿದ್ದು ಬರುವ ದಿನಗಳಲ್ಲಿ ಪಕ್ಷದ ವತಿಯಿಂದ ತಮಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಕಾಶಪ್ಪನವರ್​ ಬರುವ ದಿನಗಳಲ್ಲಿ ಪಕ್ಷದ ವತಿಯಿಂದ ತಮಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆಯಿರುವ ಕಾರಣ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.
ಸಂಪುಟಕ್ಕೆ ಸೇರ್ಪಡೆಯಾಗಬೇಕು ಎಂಬುದು ಕಾರ್ಯಕರ್ತರ ಹಾಗೂ ಸಮಾಜದ ಮುಖಂಡರ ಒತ್ತಾಸೆಯಾಗಿತ್ತು. ಅಂತಿಮವಾಗಿ ನಮ್ಮ ಒಲವು ನಿಲುವು ಏನೇ ಇದ್ದರೂ ಪಕ್ಷದ ತೀರ್ಮಾನಕ್ಕೆ ಬದ್ದರಾಗಿರಲೇ ಬೇಕು ಎಂದಿದ್ದಾರೆ.
ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಸಂಭವವಿತ್ತು ದೆಹಲಿಯಲ್ಲಿ ಕೊನೆ ಕ್ಷಣದವರೆಗೂ ಪಟ್ಟಿಯಲ್ಲಿ ನನ್ನ ಹೆಸರು ಇತ್ತು. ಆದರೆ, ಕೊನೆ ಕ್ಷಣದಲ್ಲಿ ಬಿಟ್ಡು ಹೋಗಿದೆ. ಯಾವ ಕಾರಣಕ್ಕಾಗಿ ಹೀಗೆ ಆಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ನನಗಿಂತ ಹೆಚ್ಚಾಗಿ ಬಾಗಲಕೋಟೆ ಹಾಗೂ ನನ್ನ ಮತಕ್ಷೇತ್ರವಾದ ಹುನಗುಂದ ಕ್ಷೇತ್ರದ ಕಾರ್ಯಕರ್ತರು ವಿಜಯಾನಂದ ಕಾಶಪ್ಪನವರ್ ಗೆ ಸಚಿವ ಸ್ಥಾನ ಸಿಕ್ಕರೆ ಈ‌ ಭಾಗದಲ್ಲಿ ಕಾಂಗ್ರೆಸ್ ಸಂಘಟನೆ ಹೆಚ್ಚಿನ ಅನುಕೂಲ ಆಗಲಿದೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದರು. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ತಲೆಬಾಗಲೇಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಉಚಿತ ಥಾಲಿಯ ಆಸೆಗೆ ಬಿದ್ದ ಮಹಿಳೆಗೆ 90,000 ರೂ. ವಂಚನೆ!
ನನಗೆ ಯಾವುದೇ ರೀತಿಯಲ್ಲೂ ಅಸಮಾಧಾನ ಇಲ್ಲ. ಬರುವ ದಿನಗಳಲ್ಲಿ ನನಗೆ ಖಂಡಿತ ಪಕ್ಷ ಸೂಕ್ತವಾದ ಸ್ಥಾನಮಾನ ನೀಡಲಿದೆ. ನನಗೆ ಯಾರು ಸಚಿವ ಸ್ಥಾನ ತಪ್ಪಿಸಿದರು ಎಂಬುದನ್ನು ನಾನು ಈ ಸಂದರ್ಭದಲ್ಲಿ ಬಹಿರಂಗಪಡಿಸಲು ಇಚ್ಛಿಸುವುದಿಲ್ಲ. ಯಾರೊಬ್ಬರ ಬಗ್ಗೆಯೂ ವೈಯಕ್ತಿಕವಾಗಿ ಟೀಕೆ ಮಾಡಲು ಹೋಗುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರಬೇಕು ಎಂಬುದು ಜನತೆಯ ಕನಸು.ಆ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಸಚಿವ ಸ್ಥಾನ ಕೈ ತಪ್ಪಿದರೂ ಶಾಸಕನಾಗಿಯೇ ಉತ್ತಮ ಕೆಲಸ ಮಾಡುತ್ತೇನೆ.
ಪಂಚಮಸಾಲಿ ಸಮಾಜಕ್ಕೆ‌‌ ಮೀಸಲಾತಿ ನೀಡುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಯಿತು.ಪರಿಣಾಮ ಇದೇ ಮೊದಲ ಬಾರಿಗೆ ನಮ್ಮ ಸಮುದಾಯದ ವತಿಯಿಂದ ಹೆಚ್ಚಿನ ಸಂಖ್ಯೆಯ ಶಾಸಕರನ್ನು ಜನರು ಆಯ್ಕೆ ಮಾಡಿದ್ದಾರೆ. ಹೀಗಾಗಿ ಸಂಪುಟದಲ್ಲಿ ಐವರಿಗೆ ಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡಲಾಗಿತ್ತು. ಇದರಲ್ಲಿ ತಪ್ಪೇನು ಇಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಪ್ರಮುಖರು ತಮ್ಮ ಬಳಿ ಮಾತನಾಡಿದ್ದು, ನ್ಯಾಯ ಒದಗಿಸಿ ಕೊಡುವ ಭರವಸೆಯನ್ನು ಕೊಟ್ಟಿದ್ದಾರೆ. ಸಂಪುಟದಲ್ಲಿ ಪಂಚಮಸಾಲಿ ಸಮಾಜಕ್ಕೆ ಯಾವುದೇ ರೀತಿಯಲ್ಲೂ ಅನ್ಯಾಯವಾಗಿಲ್ಲ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 6 =
Remember me
