ವಿಜಯಪುರ:ಕರೊನಾ ವೈರಸ್ ಹರಡದಂತೆ ತಡೆಯಲು ಕರ್ನಾಟಕ ಲಾಕ್​ಡೌನ್​ ಮಾಡಿರುವ ಹಿನ್ನೆಲೆಯಲ್ಲಿ ವಿಜಯಪುರ-ಕಲಬುರಗಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಸೇತುವೆಯ ಮುಂಭಾಗದಲ್ಲಿ ಮಣ್ಣಿನ ಗುಡ್ಡೆ ಹಾಗೂ ಮುಳ್ಳಿನ ರಾಶಿ ಹಚ್ಚಿ ರಸ್ತೆಯನ್ನು ಮುಚ್ಚಲಾಗಿದೆ. ವಿಜಯಪುರ ಜಿಲ್ಲೆ ಹಾಗೂ ಕಲಬುರಗಿ ಜಿಲ್ಲೆಯ ಗಡಿ ಭಾಗದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸೇತುವೆಯು ವಿಜಯಪುರದ ಇಂಡಿ ತಾಲ್ಲೂಕಿನ ‌ಚಿಕ್ಕ ಮಣ್ಣೂರ್ ಹಾಗೂ ಕಲಬುರಗಿಯ ಅಫಜಲ್​ಪುರ ತಾಲ್ಲೂಕಿನ ಹಿರೆಮಣ್ಣೂರ ಮಧ್ಯೆ ಇದೆ. ಗ್ರಾಮ ಪಂಚಾಯಿತಿ ವತಿಯಿಂದ ಅಧಿಕಾರಿಗಳು ಜೆಸಿಬಿ ಮೂಲಕ ರಸ್ತೆಯನ್ನು ಬಂದ್ ಮಾಡಿಸಿದ್ದಾರೆ.
ವಿಜಯಪುರ ಜಿಲ್ಲೆಯ ಜನರು ಕಲಬುರಗಿಗೆ ತೆರಳದಂತೆ ಹಾಗೂ ಕಲಬುರಗಿ ಜಿಲ್ಲೆಯ ಜನರು‌ ವಿಜಯಪುರ ಜಿಲ್ಲೆಗೆ ಆಗಮಿಸದಂತೆ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.
https://www.instagram.com/p/B-HEzjUH2Js/
https://www.instagram.com/p/B-HEssonOV8/
VIDEO| ಕರೊನಾ ಭೀತಿಗೆ ರಾಜ್ಯ ಲಾಕ್​ಡೌನ್​ ಆಗಿರು ಮಧ್ಯೆಯೇ ಮನಕಲಕುವ ಘಟನೆ: ಅನ್ನಕ್ಕಾಗಿ ಕಸದರಾಶಿ ಹುಡುಕಾಡಿದ ವೃದ್ಧ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × 4 =
Remember me
