ವಿಜಯಪುರ:ತೀವ್ರ ಕುತೂಹಲ ಕೆರಳಿಸಿರುವ ಮಹಾನಗರ ಪಾಲಿಕೆ ಚುನಾವಣೆಗೆ ಶುಕ್ರವಾರ ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ನಗರದ ಜನತೆ ಚಳಿ ಲೆಕ್ಕಿಸದೆ ಅತ್ಯಂತ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
35 ವಾರ್ಡ್‌ಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಾಲೆ-ಕಾಲೇಜು, ಸರ್ಕಾರಿ ಕಚೇರಿಗಳು ಸೇರಿ ವಿವಿಧೆಡೆ ಒಟ್ಟು 303 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಜಿಲ್ಲಾ ಚುನಾವಣಾ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ವಿಜಯ ಮಾಹಾಂತೇಶ ದಾನಮ್ಮನವರ ಮತ್ತು ಅವರ ಪತ್ನಿ ಶ್ವೇತಾ ದಾನಮ್ಮನವರ ಅವರು ಸರತಿ ಸಾಲಿನಲ್ಲಿ ನಿಂತು ದರಬಾರ ಶಾಲೆಯಲ್ಲಿ ಸ್ಥಾಪಿಲಾಗಿರುವ 219ರ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮತದಾನ ಒಂದು ಪವಿತ್ರವಾದ ಕರ್ತವ್ಯ, ಮತದಾನ ನಮ್ಮ ಹಕ್ಕು ಹಾಗೂ ಕರ್ತವ್ಯ ಕೂಡ. ನಮ್ಮ ಮತ ಪ್ರಗತಿಗೆ ಬರೆಯುವ ಮುನ್ನುಡಿ. ಮತದಾನ ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಹೇಳಿದರು.
ಬಳಿಕ ಎಸ್‌ಪಿ ಎಚ್‌.ಡಿ. ಆನಂದಕುಮಾರ ಅವರೊಂದಿಗೆ ವಾರ್ಡ್ ಸಂಖ್ಯೆ 48ರ ಶಹಾಪೂರ ಅಗಸಿಯಲ್ಲಿನ ಕನ್ನಡ ಹೆಣ್ಣು ಮಕ್ಕಳ ಸರ್ಕಾರಿ ಶಾಲೆ ನಂ.6ರ ಕೊಠಡಿ ಸಂಖ್ಯೆ 01ರಲ್ಲಿ ನಡೆಯುತ್ತಿರುವ ಮತದಾನ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಅಲ್ಲಿನ ಸ್ಥಿತಿಗತಿ ಅವಲೋಕಿಸಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿದರು. ಅಲ್ಲಿಂದ ಪ್ರತಿ ಮತಗಟ್ಟೆಗೂ ಭೇಟಿ ನೀಡಿದರು.
ಮಹಡಿ ಮೇಲೆ ಒಣ ಹಾಕಿದ್ದ ಬಟ್ಟೆಗೆ ತಾಗಿದ ಪಟಾಕಿ ಕಿಡಿ: ಧಗಧಗಿಸಿದ ಮನೆ

ಇನ್​ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + thirteen =
Remember me
