ವಿಜಯಪುರ:ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಜಿಲ್ಲೆ ಚಡಚಣ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನೇಕಾರ ಕಾಲೋನಿಯ ಕೀರ್ತನಾ ಮಧುಕರ (21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ವಿಜಯಪುರದ ಬಿಎಲ್​ಡಿಇ ನರ್ಸಿಂಗ್ ಕಾಲೇಜ್​ನಲ್ಲಿ ದ್ವಿತೀಯ ವರ್ಷದ ನರ್ಸಿಂಗ್ ಓದುತ್ತಿದ್ದರು.
ಮೊದಲ ವರ್ಷದ ಅಂತಿಮ ಪರೀಕ್ಷೆ ಬರೆದು ಎರಡನೇ ವರ್ಷಕ್ಕೆ ದಾಖಲಾತಿ ಪಡೆದಿದ್ದಳು ಎನ್ನಲಾಗಿದೆ. ಇತ್ತೀಚಿಗೆ ಮೊದಲು ವರ್ಷದ ಅಂತಿಮ ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ, ಇದರಿಂದ ಮನನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೀರ್ತನಾ ಅವರ ತಂದೆ ಜಾಲೇಂದ್ರನಾಥ ಮಗಳ ಆತ್ಮಹತ್ಯೆ ಬಗ್ಗೆ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.(ದಿಗ್ವಿಜಯ ನ್ಯೂಸ್​)
ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಸೂರ್ಯಕುಮಾರ್​ರನ್ನು ಸುಲಭವಾಗಿ ಔಟ್​ ಮಾಡುವುದು ಹೇಗೆ? ಪಾಕ್​ ಮಾಜಿ ಆಟಗಾರ ಕೊಟ್ಟ ಸಲಹೆ ಇದು

ಕಾಂಡೋಮ್​ ಬಳಸುವಂತೆ ಮನವಿ ಮಾಡಿದ್ರೂ ಕೇಳಲಿಲ್ಲ: ಲಂಕಾ ಕ್ರಿಕೆಟಿಗನ ಕರಾಳ ಮುಖ ಬಿಚ್ಚಿಟ್ಟ ಸಂತ್ರಸ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
