ವಿಜಯಪುರ:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನೂತನ ಸದಸ್ಯನೊಬ್ಬ ಮಹಿಳಾ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಹಾಗೂ ಓರ್ವ ಕಾನ್ಸ್​ಟೇಬಲ್​ಗೆ ಸನ್ಮಾನ ಮಾಡಿರುವ ಘಟನೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಜಿಲ್ಲೆಯ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಸದಸ್ಯನ ಸನ್ಮಾನಕ್ಕೆ ಪ್ರತಿಯಾಗಿ ಪಿಎಸ್​ಐ ಸಹ ಸಿಹಿ ತಿನ್ನಿಸಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಚುನಾವಣೆಯಲ್ಲಿ ಸಹಕರಿಸಿದ್ದಕ್ಕೆ ಋಣ ತೀರಿಸಿದ್ದಾರೆಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ:54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​

ಘಟನೆಯ ವಿವರಣೆಗೆ ಬರುವುದಾರೆ, ತಾಳಿಕೋಟ ತಾಲೂಕಿನ ಬಳವಾಟ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಸನಗೌಡ ಸಾಸನೂರ ಎಂಬುವರು ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಿಎಸ್ಐ ಗಂಗೂಬಾಯಿ ಬಿರಾದಾರಗೆ ಠಾಣೆಯಲ್ಲಿ ನೂತನ ಸದಸ್ಯ ತಮ್ಮ ಬೆಂಬಲಿಗರೊಂದಿಗೆ ಸನ್ಮಾನ ಮಾಡಿದರು. ಅಲ್ಲದೆ, ಠಾಣೆಯ ಎದುರು ಪೊಲೀಸ್ ಕಾನ್ಸಟೇಬಲ್ ಶಿವನಗೌಡ ಬಿರಾದಾರಗೂ ಸನ್ಮಾನ ಮಾಡಿದ್ದಾರೆ.
ಇದಾದ ಬಳಿಕ ಸನ್ಮಾನದ ಫೋಟೋಗಳನ್ನು ಬಸವರಾಜ ಭಜಂತ್ರಿ‌ ಹೆಸರಿನ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಪಿಎಸ್ಐ ಜಿ. ಜಿ. ಬಿರಾದಾರ ಮೇಡಂ ಹಾಗೂ ನಮ್ಮೂರ ಹಿತೈಷಿ ಪೊಲೀಸ್ ಆರಕ್ಷಕ ಶಿವನಗೌಡ ಬಿರಾದಾರರನ್ನು ಭೇಟಿಯಾಗಿ ಚುನಾವಣೆ ಗೆಲುವಿಗೆ ಸಹಕರಿಸಿದ್ದಕ್ಕೆ ಗೌರವ ಸನ್ಮಾನ‌ ಮಾಡಲಾಯಿತು ಎಂದು ಫೇಸ್​ಬುಕ್​ನಲ್ಲಿ ಬರೆದು, ಸಂತಸ ವ್ಯಕ್ತಪಡಿಸಲಾಗಿದೆ.
ಇದನ್ನೂ ಓದಿ:ನಿಮ್ಮ ಬಳಿ 1 ರೂಪಾಯಿ ನೋಟಿದೆಯಾ? ಹಾಗಿದ್ರೆ ಲಕ್ಷ ಲಕ್ಷ ಸಿಗಬಹುದು ಇಲ್ನೋಡಿ..!

ಈ ವಿಚಾರ ಅನಗತ್ಯವಾಗಿ ವಿವಾದಕ್ಕೆ ಎಡೆಮಾಡಿಕೊಡಲಿದೆ ಹಾಗೂ ಪೊಲೀಸ್​ ಸಿಬ್ಬಂದಿಗೆ ತೊಂದರೆ ತಂದೊಡ್ಡಲಿದೆ ಎಂಬ ತಪ್ಪಿನ ಅರಿವಾಗುತ್ತಿದ್ದಂತೆ ಫೋಟೋಗಳನ್ನು‌ ಫೇಸ್​ಬುಕ್​ನಿಂದ ಡಿಲೀಟ್ ಮಾಡಲಾಗಿದೆ. ಆದರೆ, ಅಷ್ಟರಲ್ಲಾಗಲೇ ಫೇಸ್​ಬುಕ್ ಪೋಸ್ಟ್ ಸ್ಕ್ರೀನ್​ಶಾಟ್​ಗಳು ಜಾಲತಾಣಗಳಲ್ಲಿ ವೈರಲ್ ಆಗಿದೆ.(ದಿಗ್ವಿಜಯ ನ್ಯೂಸ್​)
ನಿರ್ಗತಿಕ ವೃದ್ಧೆಗೆ ಹೊಸ ಮನೆ ನಿರ್ಮಿಸಿಕೊಟ್ಟ ಎಸ್​ಐ: ಇವರ ಕತೆ ಕೇಳಿದ್ರೆ ನಿಜಕ್ಕೂ ಹೆಮ್ಮೆ ಪಡ್ತೀರಾ!

ಆ ಕ್ಷಣ | ರಾಮಾಪುರ ಪೊಲೀಸ್ ಠಾಣೆ ಮೇಲೆ ಭೀಕರ ದಾಳಿ

ರಾತ್ರಿ ಕಾರು ಪಾರ್ಕ್​ ಮಾಡಿ ಬೆಳಗೆದ್ದು ನೋಡುವಷ್ಟರಲ್ಲಿ ದಂಪತಿಗೆ ಕಾದಿತ್ತು ಬಿಗ್​ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − two =
Remember me
