ಬೆಂಗಳೂರು:ಪರಿಸರ ದಿನಾಚರಣೆ ಅಂಗವಾಗಿ ಅಖಿಲ ಕರ್ನಾಟಕ ಮಕ್ಕಳ ಕೂಟ ಸಹಯೋಗ ಮತ್ತು ಚಾಮರಾಜಪೇಟೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಹಕಾರದಲ್ಲಿ ‘ವಿಜಯವಾಣಿ’ ಹಾಗೂ ‘ದಿಗ್ವಿಜಯ ನ್ಯೂಸ್’ ಚಾನಲ್ ವತಿಯಿಂದ ಆಯೋಜಿಸಲಾಗಿರುವ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಗೆ ಇಂದು ಬೆಳಗ್ಗೆ ಚಾಲನೆ ದೊರೆತಿದೆ.
ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮತ್ತು ಕಾಳಜಿ ಬೆಳೆಸುವ ಉದ್ದೇಶದಿಂದ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಶೀರ್ಷಿಕೆ ಅಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಚಾಮರಾಜಪೇಟೆ ಮಕ್ಕಳ ಕೂಟ ಆವರಣದಲ್ಲಿ ಸ್ಪರ್ಧೆ ನಡೆಯುತ್ತಿದೆ. 7ರಿಂದ 16 ವರ್ಷದ ಮಕ್ಕಳು ನೂರಾರು ಸಂಖ್ಯೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ವಿಜೇತರಿಗೆ ನಗದು ಬಹುಮಾನ ನೀಡಲಾಗುತ್ತದೆ.
ಇದನ್ನೂ ಓದಿ:ಶಿವಾಜಿನಗರ ಮಹಿಳಾ ಠಾಣೆಯ ಇನ್ಸ್​ಪೆಕ್ಟರ್​​ ಸುಮಾ ಸಸ್ಪೆಂಡ್: ಕಾರಣ ಹೀಗಿದೆ…​
ಚಿತ್ರಬಿಡಿಸುವ ಸ್ಪರ್ಧೆಗೆ ಅಖಿಲ ಕರ್ನಾಟಕ ಮಕ್ಕಳ ಕೂಟ ಅಧ್ಯಕ್ಷರಾದ ಮೋಹನ್ ದೇವ್ ಆಳ್ವ ಅವರು ಚಾಲನೆ ನೀಡಿದರು. ಚಾಮರಾಜಪೇಟೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಡಾ. ಎ. ಪ್ರಕಾಶ್, ವಿಜಯವಾಣಿ ಸಂಪಾದಕರಾದ ಚನ್ನೇಗೌಡ, ದಿಗ್ವಿಜಯ ನ್ಯೂಸ್ ಸಂಪಾದಕರಾದ ಕೆ.ಎನ್.ಸಿದ್ದು ಕಾಳೋಜಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.
1. ವಿಭಾಗ-1: 2,3 ಮತ್ತು 4ನೇ ತರಗತಿ ವಿದ್ಯಾರ್ಥಿಗಳು (ಸಬ್ ಜೂನಿಯರ್)2. ವಿಭಾಗ-2: 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳು (ಜೂನಿಯರ್)3. ವಿಭಾಗ-3: 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳು (ಸೀನಿಯರ್)
* ಪ್ರಥಮ- 3,000 ರೂಪಾಯಿ* ದ್ವಿತೀಯ- 2,000 ರೂಪಾಯಿ* ತೃತೀಯ- 1,000 ರೂಪಾಯಿ* ತಲಾ ಒಬ್ಬರಿಗೆ ಸಮಾಧಾನಕರ ಬಹುಮಾನ* ಭಾಗವಹಿಸಿದ ಎಲ್ಲರಿಗೂ ಪ್ರಶಂಸಾ ಪತ್ರ ವಿತರಣೆ
ಇಂದಿರಾ ಕ್ಯಾಂಟೀನ್​​ ಮರುಜೀವಕ್ಕೆ 355 ಕೋಟಿ ರೂ. ಬೇಡಿಕೆ

ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 9 =
Remember me
