ವಿಜಯವಾಣಿ ಸುದ್ದಿಜಾಲಬೆಂಗಳೂರು
ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮುಗಿಸಿ ಉನ್ನತ ಶಿಕ್ಷಣದ ಆಲೋಚನೆಯಲ್ಲಿರುವ ವಿದ್ಯಾರ್ಥಿ ಗಳಿಗಾಗಿ ಕನ್ನಡದ ನಂ.1 ದಿನಪತ್ರಿಕೆ ‘ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ಚಾನಲ್’ 27 ಮತ್ತು 28ರಂದು ‘ಎಜುಕೇಷನ್ ಎಕ್ಸ್‌ಪೋ’ ಆಯೋಜಿಸಿದೆ.
ಜಯನಗರ 5ನೇ ಬ್ಲಾಕ್‌ನಲ್ಲಿರುವ ಶಾಲಿನಿ ಮೈದಾನದಲ್ಲಿ ಎಕ್ಸ್‌ಪೋ ನಡೆಯಲಿದೆ. ಯುವಕರು ಭವಿಷ್ಯದಲ್ಲಿ ತಮ್ಮ ಗುರಿ ತಲುಪಲು ಉನ್ನತ ಶಿಕ್ಷಣ ಕುರಿತು ಸರಿಯಾದ ನಿರ್ದೇಶನ ನೀಡಲು ಎಕ್ಸ್‌ಪೋ’ ಆಯೋಜಿಸಲಾಗುತ್ತಿದೆ. ವೃತ್ತಿ ಶಿಕ್ಷಣ ಸೇರಿ ಉನ್ನತ ಶಿಕ್ಷಣದ ಕುರಿತು ವಿದ್ಯಾರ್ಥಿಗಳಿಗಿರುವ ಗೊಂದಲವನ್ನು ನಿವಾರಣೆ ಮಾಡುವುದಕ್ಕೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಮತ್ತು ಪಾಲಕರು ಎಕ್ಸ್ ಪೋಗೆ ಆಗಮಿಸಿ ತಮ್ಮಲ್ಲಿರುವ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳ ನಂತರ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣದ ಕುರಿತು ಅನೇಕ ಆಯ್ಕೆಗಳು ಎದುರಾಗುತ್ತವೆ. ಡಿಪ್ಲೊಮಾ, ಪಿಯು, ವೃತ್ತಿ ತರಬೇತಿ, ಇಂಜಿನಿಯ ರಿಂಗ್, ಮೆಡಿಕಲ್ ಹೀಗೆ ನೂರಾರು ಕೋರ್ಸ್‌ಗಳಲ್ಲಿ
ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು? ಯಾವ ಕಾಲೇಜಿಗೆ ಸೇರಬೇಕು? ಯಾವ ಕಾಲೇಜಿನಲ್ಲಿ ಶಿಕ್ಷಣದ ಗುಣಮಟ್ಟತೆ ಹೇಗಿದೆ? ಎಂಬ ನೂರಾರು ಪ್ರಶ್ನೆಗಳು ಮೂಡುತ್ತವೆ. ಈ ಎಲ್ಲ ಗೊಂದಲಗಳನ್ನೂ ನಿವಾರಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಎಜುಕೇಷನ್ ಎಕ್ಸ್‌ಪೋ ಆಯೋಜಿಸಲಾಗಿದೆ.
ಎರಡು ದಿನ ನಡೆಯಲಿರುವ ಈ ಎಕ್ಸ್‌ಪೋದಲ್ಲಿ ಹಲವು ವಿಶ್ವವಿದ್ಯಾಲಯಗಳು, ಇಂಜಿನಿಯರಿಂಗ್ ಕಾಲೇಜುಗಳು ಹಾಗೂ ಚಾರ್ಟೆಡ್ ಅಕೌಂಟೆಂಟ್‌ ಸಂಸ್ಥೆಗಳು ಭಾಗವಹಿಸಲಿವೆ. ಇಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತ ವೈದ್ಯಕೀಯ, ಎಂಬಿಎ, ಕಂಪ್ಯೂಟರ್ ಸೈನ್ಸ್, ಆ್ಯನಿಮೇಷನ್, ಹೋಟೆಲ್ ಮ್ಯಾನೇಜ್‌ಮೆಂಟ್, ಬಾಹ್ಯಾಕಾಶ ತಂತ್ರಜ್ಞಾನ, ಸಮೂಹ ಸಂವಹನ, ಫ್ಯಾಷನ್ ಡಿಸೈನ್ ಸೇರಿ ಇತರೆ ಕೋರ್ಸ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಸಿಗಲಿದೆ.
ಕಳೆದ 4 ಆವೃತ್ತಿಯಲ್ಲಿ ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಚಾನಲ್ ಎಕ್ಸ್ ಪೋ ಆಯೋಜಿಸುತ್ತ ಬಂದಿದೆ. ಆ ಮೂಲಕ ಪಾಲಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಮುಖಾಮುಖಿಯಾಗಿ ಚರ್ಚೆ ಸಲು ಅವಕಾಶ ಕಲ್ಪಿಸಲಾಗುತ್ತಿದೆ. ಒಂದೇ ವೇದಿಕೆಯಲ್ಲಿ ಹಲವು ಕಾಲೇಜುಗಳ ಆಡಳಿತ ಮಂಡಳಿಗಳ ಮಾಹಿತಿ ದೊರೆಯುವುದರಿಂದ ಹಲವಡೆ ಮಾಹಿತಿ ಕಲೆಹಾಕುವ ತೊಂದರೆ ತಪ್ಪಲಿದೆ. ಈ ಆವೃತ್ತಿಯಲ್ಲೂ ವಿದ್ಯಾರ್ಥಿಗಳಿಗೆ ತಾವು ಆರಿಸಿಕೊಳ್ಳ ಬಹುದಾದ ಕೋರ್ಸ್‌ಗಳು ಹಾಗೂ ಕಾಲೇಜುಗಳ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
