ಬೀದರ್:ಸಿಂಧುತ್ವ ಪ್ರಮಾಣಪತ್ರ ಪಡೆಯಲು ಕೆಲ ಜಾತಿಗಳಿಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಜಾಗೃತಿ) ವರದಿ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶ ಕೊನೆಗೂ ಹಿಂಪಡೆದಿದೆ.
ಸಿಂಧುತ್ವ ಪ್ರಮಾಣಪತ್ರ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಹುಮನಾಬಾದ್ ತಾಲೂಕಿನ ಕುಮಾರಚಿಂಚೋಳಿಯ ಸಾರಿಗೆ ನೌಕರ ಓಂಕಾರ ಶೇರಿಕಾರ ಪ್ರಕರಣ ಹಾಗೂ ಈ ಘಟನೆ ನಂತರ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಒತ್ತಡದಿಂದ ಎಚ್ಚೆತ್ತ ಸರ್ಕಾರ ಮಂಗಳವಾರ ಮರು ಆದೇಶ ಹೊರಡಿಸಿದೆ. ಗೊಂದಲದ ಆದೇಶ ಕುರಿತು ‘ವಿಜಯವಾಣಿ’ಯಲ್ಲಿ ಮಂಗಳವಾರ ‘ಸಕಾಲಕ್ಕೆ ಸಿಗದ ಸಿಂಧುತ್ವ, ಸರ್ಕಾರಿ ನೌಕರರು ಅತಂತ್ರ’ ತಲೆಬಹರದಡಿ ವರದಿ ಪ್ರಕಟವಾಗಿತ್ತು.
ಕೆಲ ಜಾತಿಗಳಿಗೆ ಮಾತ್ರ ಸಿಂಧುತ್ವ ಪ್ರಮಾಣಪತ್ರ ನೀಡುವ ಮೊದಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಪಡೆಯಬೇಕೆಂಬುದನ್ನು ಹಿಂಪಡೆಯಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸರ್ಕಾರ ಉಪ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾತಿ ಸಿಂಧುತ್ವ ಪ್ರಮಾಣಪತ್ರ ನೀಡುವ ವಿಷಯದಲ್ಲಿ ಅನುಮಾನಸ್ಪದವೆಂದು ಡಿಸಿ ಅಧ್ಯಕ್ಷತೆಯ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ಕಂಡುಬಂದಲ್ಲಿ, ಅಂಥ ಪ್ರಕರಣಗಳಲ್ಲಿ ಮಾತ್ರ ನಾಗರಿಕ ಹಕ್ಕು ಜಾತಿ ನಿರ್ದೇಶನಾಲಯದಿಂದ ವರದಿ ಪಡೆದು ನಿಯಮಾನುಸಾರ ಪರಿಶೀಲಿಸಿ ಸಿಂಧುತ್ವ ಪ್ರಮಾಣಪತ್ರ ನೀಡಬಹುದೆಂದು ಆದೇಶಿಸಲಾಗಿದೆ. ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯಿಂದ ಸ್ವೀಕೃತಗೊಂಡ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆಯನ್ನು ನಿಗದಿತ ಅವಧಿಯೊಳಗೆ (3 ತಿಂಗಳು) ಪೂರ್ಣಗೊಳಿಸಿ ವಿಚಾರಣಾ ವರದಿ ನೀಡಲು ಕ್ರಮ ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಿಂಧುತ್ವ ಪ್ರಮಾಣಪತ್ರ ಪಡೆಯಲು ಕೆಲ ಜಾತಿಗಳಿಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ವರದಿ ಕಡ್ಡಾಯಗೊಳಿಸಿದ್ದ ಆದೇಶ ವಾಪಸ್ ಪಡೆದಿದ್ದನ್ನು ಸ್ವಾಗತಿಸುವೆ. ಸಿಂಧುತ್ವ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡ ಓಂಕಾರ ಶೇರಿಕಾರ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು.
|ರಾಜಶೇಖರ ಪಾಟೀಲ್ಶಾಸಕ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − three =
Remember me
