ಮೈಸೂರು: ಕನ್ನಡದ ನಂ.1 ದಿನಪತ್ರಿಕೆ ‘ವಿಜಯವಾಣಿ’ ಮತ್ತು ದಿಗ್ವಿಜಯ ನ್ಯೂಸ್ ಚಾನಲ್ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ ರಾಜ್ಯಮಟ್ಟದ ‘ಕೃಷಿಮೇಳ’ ಶುಕ್ರವಾರ ಉದ್ಘಾಟನೆಗೊಳ್ಳಲಿದ್ದು, ಕೃಷಿ ದಿಬ್ಬಣ ಕಣ್ತುಂಬಿಕೊಳ್ಳಲು ವೇದಿಕೆ ಸಜ್ಜಾಗಿದೆ.
ಕೃಷಿ ಸಂಸ್ಕೃತಿ ಅನಾವರಣಕ್ಕೆ ಸಾಕ್ಷಿಯಾಗುವ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೇಳಕ್ಕೆ ಚಾಲನೆ ನೀಡುವರು. ವಿಆರ್​ಎಲ್ ಸಮೂಹ ಸಂಸ್ಥೆಯ ಚೇರ್ಮನ್ ಡಾ. ವಿಜಯ ಸಂಕೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ, ವಸತಿ ಸಚಿವ ವಿ.ಸೋಮಣ್ಣ, ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ಸೇರಿ ಹಲವು ಗಣ್ಯರು, ಸಾವಿರಾರು ಜನರು ಈ ಉತ್ಸವಕ್ಕೆ ಸಾಕ್ಷೀಕರಿಸಲಿದ್ದಾರೆ. ಬಳಿಕ ವಿವಿಧ ಚಟುವಟಿಕೆಗಳು ಗರಿಗೆದರಲಿವೆ.
ಎಲ್ಲರಿಗೂ ಮುಕ್ತ ಆಹ್ವಾನ ಇರುವ ಈ ಮೇಳವು ರೈತರು, ಕೃಷಿ ಪರಿಣತರು ಮತ್ತು ಸಾರ್ವಜನಿಕರನ್ನು ಕೈಬೀಸಿ ಕರೆಯುತ್ತಿದೆ. ದೇಶದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮೈಸೂರು ವಿಶ್ವವಿದ್ಯಾಲಯವು ಮೇಳಕ್ಕೆ ಸಹಯೋಗ ನೀಡಿದೆ. ಮೈದಾನದಲ್ಲಿ 100 ಮಳಿಗೆಗಳನ್ನು ತೆರೆಯಲಾಗಿದೆ.
ನವಧಾನ್ಯ ಶಿವಲಿಂಗ ದರ್ಶನ
ಶಿವರಾತ್ರಿ ಹಿನ್ನೆಲೆಯಲ್ಲಿ ಮೇಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ನವಧಾನ್ಯಗಳಿಂದ ನಿರ್ವಿುಸಿದ ಶಿವಲಿಂಗ ದರ್ಶನವೂ ಸಿಗಲಿದೆ. ನವಧಾನ್ಯಗಳಾದ ಅಕ್ಕಿ, ಗೋಧಿ, ಉದ್ದು, ಹೆಸರು, ಅವರೆ, ಕಡಲೆ, ತೊಗರಿ, ಎಳ್ಳು ಮತ್ತು ಹುರುಳಿ ಕಾಳುಗಳಿಂದ ಶಿವಲಿಂಗ ನಿರ್ವಿುಸಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
