ಬೆಂಗಳೂರು: ಶಿಕ್ಷಣದಲ್ಲಿ ಉತ್ತಮ ಗುಣಮಟ್ಟ ಕಾಪಾಡುವುದರ ಜತೆಗೆ ಶಿಕ್ಷಕರ ಸೇವೆಯಲ್ಲಿನ ಸಮಸ್ಯೆ ಹಾಗೂ ವರ್ಗಾವಣೆ ಗೊಂದಲ ಪರಿಹರಿಸುವುದಕ್ಕಾಗಿ ಜಿಲ್ಲಾಮಟ್ಟದಲ್ಲೇ ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಜಯವಾಣಿ, ದಿಗ್ವಿಜಯ ನ್ಯೂಸ್ 24X7 ಸೋಮವಾರ ಆಯೋಜಿಸಿದ್ದ ಫೋನ್ ಇನ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಮಾಹಿತಿ ಹಂಚಿ ಕೊಂಡರು. ತಮ್ಮ ಈ ಚಿಂತನೆ ಜತೆಯಲ್ಲೇ ಶಿಕ್ಷಣ ವ್ಯವಸ್ಥೆಯ ಸುಧಾ ರಣೆಗೆ ಹಮ್ಮಿಕೊಂಡಿರುವ ಯೋಜನೆಗಳ ಕುರಿತು ಮಾಹಿತಿ ಬಿಚ್ಚಿಟ್ಟರು.
ಶಿಕ್ಷಕ ಸ್ನೇಹಿ ವಾತಾವರಣ: ಕಡ್ಡಾಯ ವರ್ಗಾವಣೆಯಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಮಾಡುತ್ತಿದ್ದರಿಂದಾಗಿ ಬಹುತೇಕ ಶಿಕ್ಷಕರು ಕಷ್ಟಪಟ್ಟು ಆ ಸ್ಥಳಕ್ಕೆ ಹೋದರೂ ಇಷ್ಟ ಇಲ್ಲದ ಮನಸ್ಸಿನಿಂದ ಪಾಠ ಮಾಡುತ್ತಿದ್ದರು. ಈ ಸಮಸ್ಯೆ ಬಗೆಹರಿಸುವ ಹಾಗೂ ಶಿಕ್ಷಕ ಸ್ನೇಹಿ ವಾತಾವರಣ ನಿರ್ವಿುಸುವ ಉದ್ದೇಶದಿಂದ ಮುಂದೆ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ತಾವು ಇರುವ ಜಿಲ್ಲೆಯಲ್ಲೇ ಖಾಲಿ ಇರುವ ಹುದ್ದೆ ಭರ್ತಿಗೆ ಅವಕಾಶ ಕಲ್ಪಿಸಲಾಗುವುದು. ಕಡ್ಡಾಯ ವರ್ಗಾವಣೆಯಲ್ಲಿ ಸಾಕಷ್ಟು ಬದಲಾವಣೆ ತರಲು ನಿರ್ಧರಿಸಲಾಗಿದೆ ಎಂದರು.
ಸುಗಮ ಪರೀಕ್ಷೆಗೆ ಸಚಿವರ ಸೂತ್ರ1 ಪ್ರಶ್ನೆಪತ್ರಿಕೆ ಸೋರಿಕೆ ಆಗದಂತೆ ಮುನ್ನೆಚ್ಚರಿಕೆ ವಹಿಸುವುದು2 ಸಮೂಹ ಕಾಪಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವುದು3 ನಿಗದಿತ ಅವಧಿಯಲ್ಲಿ ಮೌಲ್ಯ ಮಾಪನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
