ಬೆಂಗಳೂರು : ಪೊಲೀಸ್ ದಂಪತಿಗಳಿಗೆ ಕೊನೆಗೂ ಒಟ್ಟಿಗಿರುವ ಭಾಗ್ಯ ದೊರೆತಿದೆ. ಪತಿ-ಪತ್ನಿ ಪ್ರಕರಣಗಳಲ್ಲಿ 86 ಕಾನ್​ಸ್ಟೆಬಲ್​ಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೊಳಿಸಿ ಮಂಗಳವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಸೇವೆಯಲ್ಲಿರುವ ಪತಿ-ಪತ್ನಿ ಒಟ್ಟಿಗೆ ಬದುಕಲಾಗದೆ ‘ನಾನೊಂದು ತೀರ ನೀನೊಂದು ತೀರ’ ಎಂದು ಎದುರಿಸುತ್ತಿದ್ದ ಸಂಕಷ್ಟದ ಕುರಿತು ‘ವಿಜಯವಾಣಿ’ ಪ್ರಕಟಿಸಿದ ಸರಣಿ ವಿಶೇಷ ವರದಿಗಳ ಪರಿಣಾಮವಾಗಿ ಒಂದೇ ಜಿಲ್ಲೆಯಲ್ಲಿ ಸೇವೆ ಯೋಗ ಒಲಿದಿದೆ.
7 ವರ್ಷ ಸೇವೆ ಪೂರೈಸಿ, ಸ್ವಂತ ಕೋರಿಕೆಯ ಮೇರೆಗೆ ಸೇವಾ ಜೇಷ್ಠತೆಯನ್ನು ಬಿಟ್ಟುಕೊಡುವ ಷರತ್ತಿಗೊಳಪಟ್ಟು 86 ಕಾನ್​ಸ್ಟೆಬಲ್​ಗಳನ್ನು ವರ್ಗಾವಣೆಗೊಳಿಸಿ, ನಿಯೋಜನೆಗೊಳಿಸಿರುವ ಜಿಲ್ಲೆಯ ಪಟ್ಟಿಯನ್ನು ಮಂಗಳವಾರ
ಬಿಡುಗಡೆ ಮಾಡಿದೆ. ವರ್ಗಾ ವಣೆಗೊಂಡಿರುವ ಈ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸುವ ಮುನ್ನ ವಿವಾಹ ನೋಂದಣಿ ಪ್ರಮಾಣ ಪತ್ರ ಮತ್ತು ಸೇವಾ ದೃಢೀಕರಣದ ಮೂಲ ಪ್ರತಿಗಳನ್ನು ಪರಿಶೀಲಿಸಬೇಕು. ಪತಿ-ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದು, ಕನಿಷ್ಠ 7 ವರ್ಷ ಸೇವೆ ಪೂರ್ಣಗೊಳಿಸಿರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಆಯಾ ಘಟಕಾಧಿಕಾರಿಗಳಿಗೆ ಆದೇಶಿಸಲಾಗಿದೆ. ವರ್ಗಾವಣೆಗೊಂಡಿರುವ ಸಿಬ್ಬಂದಿ ಗಳಲ್ಲಿ ಹೆಚ್ಚಿನವರು ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಬೆಂಗಳೂರು ಜಿಲ್ಲೆಗಳಿಗೆ ಬಂದಿದ್ದಾರೆ.
ವಿಜಯವಾಣಿ ವರದಿಗೆ ಎಚ್ಚೆತ್ತಿದ್ದ ಸರ್ಕಾರ:ವರ್ಗಾವಣೆ ಮಾಡುವುದಾಗಿ ಪದೇಪದೆ ಸುಳ್ಳು ಭರವಸೆಗಳನ್ನು ಕೊಟ್ಟು ‘ಕೈ’ ಕೊಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪೊಲೀಸ್ ವಲಯದಲ್ಲಿ ಆಕ್ರೋಶ ಭುಗಿಲೆದ್ದು, ವರ್ಗಾವಣೆ ಮಾಡಿ ಇಲ್ಲವೇ ದಯಾಮರಣ ಕೊಡಿ ಎಂದು ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗೆ ಪತ್ರ ಬರೆಯಲು ನಿರ್ಧರಿಸಿದ್ದ ಸಿಬ್ಬಂದಿ, ಸಹಿ ಸಂಗ್ರಹ ಪ್ರಕ್ರಿಯೆ ಆರಂಭಿಸಿದ್ದರು. ಈ ಬಗ್ಗೆ ಫೆ.23ರಂದು ವಿಜಯವಾಣಿ ಮುಖಪುಟದಲ್ಲಿ ‘ಭುಗಿಲೆದ್ದ ಪೊಲೀಸರ ಆಕ್ರೋಶ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತ ಸರ್ಕಾರ, ಲೋಕಸಭೆ ಚುನಾವಣಾ ನೀತಿಸಂಹಿತೆ ಜಾರಿಯಾಗುವ ಮುನ್ನವೇ ಅರ್ಹ ಪೊಲೀಸರ ವರ್ಗಾವಣೆ ಪ್ರಸ್ತಾವನೆಗಳ ಬಗ್ಗೆ ಕ್ರಮ ತೆಗೆದುಕೊಂಡು ವರದಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಸೂಚನೆ ಕೊಟ್ಟಿತ್ತು. ಈ ಹಿಂದೆಯೂ ಹಲವು ಬಾರಿ ಪೊಲೀಸ್ ದಂಪತಿ ಸಂಕಷ್ಟದ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸುವ ಮೂಲಕ ವಿಜಯವಾಣಿ, ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 3 =
Remember me
