ವಿಜಯವಾಣಿಆರಂಭದಿಂದಲೂ ಜನಪರ ನಿಲುವು ಮತ್ತು ಸಮಾಜಮುಖಿ ಕಾರ್ಯಕ್ರಮಗಳ ಮೂಲಕವೇ ಮನೆಮಾತಾದದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಮಹತ್ವದ ದಿನಾಚರಣೆಗಳ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು, ಅಭಿಯಾನಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದೇವೆ. ಒಂದೆರಡು ಉದಾಹರಣೆ ನೀಡುವುದಾದರೆ, ಬೆಂಗಳೂರಿನಲ್ಲಿ ನಡೆದ ‘ಸ್ವಚ್ಛ ಬೆಂಗಳೂರು’ ಅಭಿಯಾನ ಅಭೂತಪೂರ್ವ ಸ್ಪಂದನೆ ಪಡೆದು ಯಶಸ್ಸು ಕಂಡಿತ್ತು. ಇದೇ ಫೆಬ್ರವರಿ 21-23ರವರೆಗೆ ಮೈಸೂರಿನಲ್ಲಿ ಕೃಷಿಮೇಳ ಹಮ್ಮಿಕೊಳ್ಳಲಾಗಿತ್ತು. ರೈತರಿಗೆ ಆಧುನಿಕ ಕೃಷಿಪದ್ಧತಿಗಳ ಪರಿಚಯ ನೀಡುವ ಜತೆಗೆ ತಂತ್ರಜ್ಞಾನ ಬೆಳವಣಿಗೆಗಳ ಬಗ್ಗೆಯೂ ಅಲ್ಲಿ ಮಾಹಿತಿ, ವಿಚಾರವಿನಿಮಯ ನಡೆಯಿತು. ಒಂದೂವರೆ ಲಕ್ಷಕ್ಕೂ ಅಧಿಕ ರೈತರು ಬಂದು, ಸಕ್ರಿಯವಾಗಿ ಭಾಗವಹಿಸಿ ಕೃಷಿಮೇಳವನ್ನು ಯಶಸ್ವಿಗೊಳಿಸಿದರು.
ಕಳೆದ ವರ್ಷ ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಬೃಹತ್ ವಾಕಥಾನ್, ಸಾಧಕ ಮಹಿಳೆಯರಿಗೆ ಪ್ರಶಸ್ತಿ ಕಾರ್ಯಕ್ರಮ ಏರ್ಪಡಿಸಿದ್ದೆವು. ವಿದ್ಯಾರ್ಥಿನಿಯರು, ನಾನಾ ಕ್ಷೇತ್ರಗಳ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದಿದ್ದರು. ಈ ಸಲವೂ ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಇದೇ ಮಾರ್ಚ್ 8ರಂದು ಬೆಂಗಳೂರಿನಲ್ಲಿ ಬೃಹತ್ ವಾಕಥಾನ್ ಮತ್ತು ಸಾಧಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆವು. ವಾಕಥಾನ್ ವಿಧಾನಸೌಧದ ಮುಂಭಾಗದಿಂದ ಶುರುವಾಗಿ ಜ್ಞಾನಜ್ಯೋತಿ ಸಭಾಂಗಣದವರೆಗೆ ನಡೆದು, ಅಲ್ಲಿ ಸಭಾ ಕಾರ್ಯಕ್ರಮ ನಡೆಸುವುದಕ್ಕೆ ಸಕಲ ಸಿದ್ಧತೆಗಳು ನಡೆದಿದ್ದವು. ಆದರೆ ಈಚಿನ ದಿನಗಳಲ್ಲಿ ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಉಂಟಾಗಿರುವುದರಿಂದ, ಜನರಿಗೆ ತೊಂದರೆಯಾಗಬಾರದೆಂಬ ಏಕೈಕ ಕಾರಣಕ್ಕೆ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ರದ್ದುಪಡಿಸುವ ನಿರ್ಧಾರಕ್ಕೆ ಬಂದಿದ್ದೇವೆ.
ಒಂದು ಪ್ರಮುಖ ಮಾಧ್ಯಮವಾಗಿ ನಮ್ಮ ಸಾಮಾಜಿಕ ಕಾಳಜಿಯ ಭಾಗವಾಗಿ ಇಂಥ ನಿರ್ಣಯ ತೆಗೆದುಕೊಳ್ಳುವುದು ಅನಿವಾರ್ಯವಾಯಿತೆಂದು ಈ ಮೂಲಕ ತಿಳಿಸಲಿಚ್ಛಿಸುತ್ತೇವೆ. ಉಳಿದಂತೆ, ನಮ್ಮ ಜನಪರ ಒಲವು-ನಿಲುವು ಎಂದಿನಂತೆ ಮುಂದುವರಿಯುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 2 =
Remember me
