ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ವಿಜಯ ಸಾಧಿಸಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಆ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ನೇಮಕವನ್ನು ಪ್ರಮುಖ ದಾಳವಾಗಿ ಪ್ರಯೋಗಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಗರಿಷ್ಠ ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಈಗಾಗಲೇ ನಾನಾ ಪಟ್ಟುಗಳನ್ನು ಹಾಕುತ್ತಿರುವ ಕಮಲಪಡೆ, ಅದರ ಮೊದಲ ಹಂತವಾಗಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷರ ಪಟ್ಟ ನೀಡಿದೆ ಎನ್ನಲಾಗಿದೆ.
ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಜಯ ಗಳಿಸಲು ಸಾಧ್ಯವಾಗದಿರುವುದು ಹಾಗೂ ರಾಜ್ಯದಲ್ಲಿ ಅಧಿಕಾರ ತಪ್ಪಿ ಹೋಗಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿತ್ತು.
ಇದನ್ನೂ ಓದಿ:ಯುವಕರೇಕೆ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ ಎಂದು ಅಚ್ಚರಿಯೇ?: 70 ಗಂಟೆ ಕೆಲಸ.. ಮೂರ್ತಿ ವರ್ಸಸ್ ಮೂರ್ತಿ…
ಅವೆಲ್ಲ ನಕಾರಾತ್ಮಕ ಸಂಗತಿಗಳನ್ನು ಮರೆಮಾಚುವ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಭರ್ಜರಿ ವಿಜಯದ ನಿರೀಕ್ಷೆಯಲ್ಲಿರುವ ಬಿಜೆಪಿ ಅದನ್ನು ವಿಜಯೇಂದ್ರ ಮೂಲಕ ಸಾಧಿಸಲು ತಂತ್ರ ಹೂಡಿದೆ.
ಬಿ.ಎಸ್​.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿ, ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಆಗಿಸಿದ ಬೆನ್ನಿಗೇ ರಾಜ್ಯ ಬಿಜೆಪಿಯಲ್ಲಿ ಒಂದು ಆಂತರಿಕ ಅಸಮಾಧಾನ ಹೊಗೆಯಾಡಲು ಆರಂಭಿಸಿತ್ತು.
ಮಾತ್ರವಲ್ಲ, ರಾಜ್ಯ ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹಿಡಿತ ಸಡಿಲಗೊಂಡಿದೆ ಎಂಬಂತಹ ಅಭಿಪ್ರಾಯ ಹರಿದಾಡಲಾರಂಭಿಸಿತ್ತು. ಆದರೆ ಇದೀಗ ಅವರ ಪುತ್ರ ವಿಜಯೇಂದ್ರ ಅವರಿಗೇ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿರುವುದು ರಾಜ್ಯದಲ್ಲಿ ರಾಜಾಹುಲಿ ಪ್ರಭಾವ ತಗ್ಗಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂಬ ಮಾತುಗಳು ಕೇಳಿ ಬರಲಾರಂಭಿಸಿವೆ.
ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ

ಚುನಾವಣಾ ಕ್ಯಾಂಪೇನ್ ವಾಹನದ ಮೇಲಿಂದ ಮುಗ್ಗರಿಸಿಬಿದ್ರು ಸಚಿವ, ಸಂಸದ, ಶಾಸಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − seven =
Remember me
