ಮಂಗಳೂರು: ಮಂಗಳೂರಿನಲ್ಲಿ ಗುರುವಾರ ಬಿಜೆಪಿ ಕಾರ್ಯಕಾರಿಣಿ ನಡುವೆಯೇ ಬಿ.ವೈ.ವಿಜಯೇಂದ್ರ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಜನ್ಮದಿನದ ನಿಮಿತ್ತ ಇಂದು ಮೊದಲಿಗೆ ಮಂಗಳಾದೇವಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ನಂತರ ಪೂಜ್ಯ ತಂದೆಯವರ ಆಶೀರ್ವಾದ ಪಡೆದು ದಿನವನ್ನು ಪ್ರಾರಂಭ ಮಾಡಿದ್ದೇನೆ ಎಂದು ವಿಜಯೇಂದ್ರ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿರುವ ಬಾಲ ಸಂರಕ್ಷಣಾ ಕೇಂದ್ರಕ್ಕೆ ತೆರಳಿ ಅಲ್ಲಿನ ಮಕ್ಕಳೊಂದಿಗೆ ಮೊದಲು ತಮ್ಮ ಜನ್ಮದಿನ ಆಚರಿಸಿದರು.ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಹಿರಿಯರಾದ ಭಾನುಪ್ರಕಾಶ್ ಸೇರಿದಂತೆ ಹಲವು ನಾಯಕರ ಹಾರೈಕೆ, ಆಶೀರ್ವಾದ ಪಡೆಯುವ ಸದವಕಾಶ ದೊರಕಿದೆ ಎಂದೂ ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
