ಬೆಂಗಳೂರು:ಸಾಮಾಜಿಕ ಸುಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತನ್ನ ಒಂದು ವರ್ಷದ ಆಡಳಿತದಲ್ಲಿ ಕ್ರಿಮಿನಲ್​ಗಳು, ಕೊಲೆಗಡುಕರ ತಾಣವನ್ನಾಗಿಸುತ್ತಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಬೀಗುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಾಡುಹಗಲೇ ಅಮಾಯಕ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈಯಲಾಗುತ್ತಿದೆ. ಮನೆ ಮನೆಗಳಿಗೇ ನುಗ್ಗಿ ಗೃಹಲಕ್ಷ್ಮಿಯರನ್ನು ಚಾಕುವಿನಿಂದ ಇರಿದು ಕೊಲ್ಲಲಾಗುತ್ತಿದೆ, ಭಾಗ್ಯಲಕ್ಷ್ಮಿಯರನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಅರಣ್ಯರೋಧನವಾಗುತ್ತಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಜಯೇಂದ್ರ ಯಡಿಯೂರಪ್ಪ, ರಾಜ್ಯಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯ ನೇಹಾ, ಮಡಿಕೇರಿಯಲ್ಲಿ ಮೀನಾಳ ರುಂಡ ಕತ್ತರಿಸಿ ಕೊಲೆಗೈದ ಘಟನೆ, ಮತ್ತದೇ ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ, ಬೆಂಗಳೂರಿನ ಪದವಿ ವಿದ್ಯಾರ್ಥಿನಿಯ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವುದೂ ಸೇರಿದಂತೆ ನಿರಂತರ ಹತ್ಯೆ ಪ್ರಕರಣಗಳು ವರದಿಯಾಗುತ್ತಲೇ ಇವೆ ಎಂದರು.
ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಮನೆಯಿಂದ ಆಚೆ ಬರಲೂ ಭಯ ಪಡುವ ವಾತಾವರಣ ನಿರ್ಮಾಣಗೊಂಡಿದೆ. ದುಷ್ಟ ಹಂತಕರಿಗೆ ಯಾರ ಭಯವೂ ಇಲ್ಲದಂತಾಗಿದ್ದು ಕೊಲೆ, ದಾಂಧಲೆ, ದರೋಡೆ, ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದರೂ, ಸಾಮಾಜಿಕ ಭದ್ರತೆ ಕಲ್ಪಿಸಿ ಜನರಿಗೆ ಅಭಯ ತುಂಬಬೇಕಾದ ಗೃಹ ಇಲಾಖೆ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆಯಿಡದೇ ನಾಗರಿಕ ಸಮಾಜದ ವಿಶ್ವಾಸ ಕಳೆದುಕೊಂಡಿದೆ ಎಂದು ದೂರಿದರು.
https://x.com/BYVijayendra/status/1791403462925942886
ದುರ್ಬಲರು, ಅಬಲೆಯರು ಭರವಸೆ ಹೊತ್ತು ಧೈರ್ಯದಿಂದ ಪೊಲೀಸ್ ಠಾಣೆ ಮೆಟ್ಟಿಲೇರುವ ವಾತಾವರಣ ಕಲ್ಪಿಸಲಾಗದ ಕಾಂಗ್ರೆಸ್ ಸರ್ಕಾರದ ನಿಷ್ಕ್ರೀಯ ಆಡಳಿತದಿಂದ ದೇಶದಲ್ಲಿ ರಾಜ್ಯದ ಗೌರವ, ಘನತೆಗಳು ಕುಸಿದು ಬೀಳುತ್ತಿದೆ. ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರಲಾರದ ಸ್ಥಿತಿ ತಲುಪಿರುವ ಕಾಂಗ್ರೆಸ್ ಸರ್ಕಾರ ಅಸಮರ್ಥ ಗೃಹ ಸಚಿವರ ರಾಜೀನಾಮೆ ಪಡೆಯಲಿ, ಹಾಗೆಯೇ ಮುಖ್ಯಮಂತ್ರಿಗಳು ಸರಣಿ ಘಟನೆಗಳ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸುವೆ ಎಂದಿದ್ದಾರೆ.
ಆತನಿಗೆ ಇವರ್‍ಯಾರು‌ ಬೆಂಬಲ ಕೊಡಲಿಲ್ಲ! MIನ ಅತ್ಯುತ್ತಮ ಆಟಗಾರನ ಬಗ್ಗೆ ನಮನ್ ಧಿರ್​​ ಬಿಚ್ಚುಮಾತು

ನನ್ನ ಕ್ಯಾಪ್ಟನ್ಸಿಯಲ್ಲಿ ಈತನ ಪ್ರತಿಭೆ ಅಂದೇ ಗುರುತಿಸಬೇಕಿತ್ತು! ತಪ್ಪು ಮಾಡಿದೆ; ಗೌತಮ್ ಗಂಭೀರ್​ ಪಶ್ಚಾತಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 14 =
Remember me
