ಬೆಂಗಳೂರು:ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ಆಯ್ಕೆ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ವಿಳಂಬದ ಬಗ್ಗೆ ಬಿಸಿ ಚರ್ಚೆ ನಡೆಯುತ್ತಿರುವಾಗ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿದ್ದಷ್ಟೇ, ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ, ಇಬ್ಬರೂ ನಾಯಕರೊಂದಿಗೆ ರಾಜ್ಯ ರಾಜಕೀಯ ವಿದ್ಯಮಾನ ಕುರಿತು ಚರ್ಚಿಸಿದ್ದಾರೆ.
ನಡ್ಡಾ ಅವರನ್ನು ಬುಧವಾರ, ಅಮಿತ್ ಷಾ ಅವರನ್ನು ಗುರುವಾರ ಭೇಟಿಯಾಗಿರುವ ಬಿ.ವೈ.ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿದ್ದಾರೆ.
ಸಂಘಟನಾ ಚಾರ್ತುಯದ ಚಾಣಕ್ಯನೆಂದೇ ಬಣ್ಣಿಸಲ್ಪಡುವ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಲಾಯಿತು. ರಾಜ್ಯದಲ್ಲಿ ವೈಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು ಎಂದು ತಿಳಿಸಿದ್ದಾರೆ.
ನಡ್ಡಾ ಅವರನ್ನು ಭೇಟಿ ಮಾಡಿ ಆಶೀರ್ವಾದ ಕೋರಲಾಯಿತು. ವಿಧಾನಸಭೆ ಹಾಗೂ ಹೊರಗೆ ‘ಕಾಂಗ್ರೆಸ್ ವೈಲ್ಯ ಹಾಗೂ ಜನವಿರೋಧಿ ಕ್ರಮಗಳ’ ವಿರುದ್ಧ ಹೋರಾಟ ರೂಪಿಸುವುದು, ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಪಡೆಯಲಾಯಿತು ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
