ಬೆಂಗಳೂರು:ಸಿದ್ದರಾಮಯ್ಯನವರೇ ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನ ಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ದ್ರೋಹಿಗಳು ಧೈರ್ಯತೋರುತ್ತಾರೆ, ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದರೆ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ ? ಎಂಬುದು ಬಹುದೊಡ್ಡ ಪ್ರಶ್ನೆಯಾಗಿ ರಾಜ್ಯದ ಜನರನ್ನು ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ:2008ರ ಐಪಿಎಲ್​ ಮೊದಲ ಆವೃತ್ತಿಯಲ್ಲೇ ಶತಕ ಸಿಡಿಸಿದ ಸ್ಟಾರ್​ ಬ್ಯಾಟ್ಸ್​​ಮನ್​ಗಳು ಇವರೇ ನೋಡಿ…..
“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಗತ ಶಕ್ತಿಗಳಿಗೆ ಸ್ವತಂತ್ರ್ಯ ದೊರೆತ ವಾತಾವರಣ ನಿರ್ಮಾಣವಾಗಿದೆ, ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ. ‘ಬೆಂದ ಮನೆಯಲ್ಲಿ ಗಳ ಇರಿಯುವ’ ರಾಜಕಾರಣ ಮಾಡುವ ದುರ್ಗತಿ ಬಿಜೆಪಿಗೆ ಬಂದಿಲ್ಲ ವಿಧಾನ ಸೌಧದಲ್ಲೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೇಳಿಬಂದರೆ ನಾವು ಕೈಕಟ್ಟಿ ಕೂರಬೇಕೇ?” ಎಂದು ಪ್ರಶ್ನಿಸಿದರು.
ಮಾನ್ಯ@siddaramaiahನವರೇ,ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನ ಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು…pic.twitter.com/RWWmeMcc4O
— Vijayendra Yediyurappa (@BYVijayendra)March 4, 2024

“ಈ ಸಂಬಂಧ ಮಾಧ್ಯಮಗಳ ವರದಿ ನೀವು ನಂಬಲ್ಲಿಲ್ಲ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಲಿಸಲಿಲ್ಲ, ರಾಷ್ಟ್ರ ಹಿತಾಸಕ್ತಿಯ ಈ ಗಂಭೀರ ಪ್ರಕರಣದ ಬಗ್ಗೆ ತಾತ್ಸಾರ ತೋರುತ್ತಿರುವುದರ ನಿಮ್ಮ ವರ್ತನೆ ರಾಷ್ಟ್ರ ದ್ರೋಹಿಗಳನ್ನು ರಕ್ಷಿಸಲು ಆದ್ಯತೆ ನೀಡುತ್ತಿರುವಂತಿದೆ. ಖಾಸಗಿ ಎಫ್​ಎಸ್​ಎಲ್ (FSL) ವರದಿ ಈಗಾಗಲೇ ಈ ಕುರಿತು ಧೃಡೀಕರಣ ನೀಡಿಯಾಗಿದೆ, ಸರ್ಕಾರಿ ವರದಿ ಕೂಡ ನಿಮ್ಮ ಕೈ ಸೇರಿದೆ ಆದಾಗ್ಯೂ ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ” ಎಂದು ಟ್ವೀಟ್​ ಮುಖೇನ ಟೀಕಿಸಿದ್ದಾರೆ.
ಮದುವೆಗೂ ಮುನ್ನ ಆರೋಗ್ಯ ಸಮಸ್ಯೆ ತೋಡಿಕೊಂಡ ಅನಂತ್​; ಮಗನ ಮಾತಿಗೆ ಕಣ್ಣೀರಿಟ್ಟ ಮುಖೇಶ್ ಅಂಬಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 17 =
Remember me
