ಬೆಂಗಳೂರು:ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟ ಆಡುವುದೇಕೆ ಎಂದು ರಾಜ್ಯ ಸರ್ಕಾರದ ನಡೆ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಯುಡಿಯೂರಪ್ಪ ಕಿಡಿಕಾರಿದ್ದಾರೆ.
ಇದನ್ನೂ ಓದಿ:ಹೀಗೆ ಮಾಡೋದಾದ್ರೆ ಎಕ್ಸಾಂ ಏಕೆ? ಪರೀಕ್ಷಾ ಕೊಠಡಿಯಲ್ಲಿ ಬಯಲಾಯ್ತು ಶಿಕ್ಷಕನ ಖತರ್ನಾಕ್​ ಕೆಲಸ
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ, ಕನ್ನಡಿಗ, ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ. ಈ ನೆಲದಲ್ಲಿ ಬದುಕು ಮಾಡುತ್ತ, ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆಯಿಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಗಳು ಈ ಕುರಿತು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಹೀಗೆ ಮಾಡೋದಾದ್ರೆ ಎಕ್ಸಾಂ ಏಕೆ? ಪರೀಕ್ಷಾ ಕೊಠಡಿಯಲ್ಲಿ ಬಯಲಾಯ್ತು ಶಿಕ್ಷಕನ ಖತರ್ನಾಕ್​ ಕೆಲಸ
ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸಲಾರರು ಎಂದಿದ್ದಾರೆ.
ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ.
ಪಾಕಿಸ್ತಾನದಲ್ಲಿ ಜಸ್ಪ್ರೀತ್​ ಬುಮ್ರಾ! ಮಾಜಿ ಕ್ರಿಕೆಟಿಗ ವಾಸೀಮ್ ಅಕ್ರಂ ಹಂಚಿಕೊಂಡ ವಿಡಿಯೋ ಸಿಕ್ಕಾಪಟ್ಟೆ ವೈರಲ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + sixteen =
Remember me
