ತುಮಕೂರು:ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಕುತೂಹಲ ಇನ್ನೂ ಹಾಗೇ ಉಳಿದಿದ್ದರೆ, ಮತ್ತೊಂದೆಡೆ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಾವ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂಬುದೂ ಕೆಲವರಲ್ಲಿ ಕೌತುಕ ಮೂಡಿಸಿದೆ. ಅದಕ್ಕೆ ಇಂದು ವೇದಿಕೆಯೊಂದರಲ್ಲಿ ವಿಜಯೇಂದ್ರ ಆಡಿದ ಮಾತು ಉತ್ತರ ನೀಡಿದಂತಿದೆ.
ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಇಂದು ನಡೆದ ಶ್ರೀ ಗುರು ಸಿದ್ದರಾಮೇಶ್ವರ ‌ಜಯಂತ್ಯೋತ್ಸವ ಸಮಾರೋಪ ಸಮಾರಂಭದಲ್ಲಿ ವಿಜಯೇಂದ್ರ ವೇದಿಕೆಯಲ್ಲಿ ಮಾತನಾಡಲು ಮುಂದಾದಾಗ ಅವರ ಪರವಾಗಿ ನಿರಂತರವಾಗಿ ಜೈಕಾರ-ಚಪ್ಪಾಳೆಗಳು ಕೇಳಿಬಂದವು.
ಅಭಿಮಾನಿಗಳ ಈ ಅಬ್ಬರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ನೀವು ಹೀಗೆ ಗಲಾಟೆ ಮಾಡಿದರೆ ಬಿ.ಸಿ.ನಾಗೇಶ್ ಅವರನ್ನು ಸೈಡಿಗೆ ಕಳುಹಿಸಿ ತಿಪಟೂರಿನಿಂದಲೇ ನಾನು ಚುನಾವಣೆಗೆ ನಿಲ್ಲಬೇಕಾಗುತ್ತದೆ ಎಂದು ಹೇಳಿದರು. ಅವರು ವೇದಿಕೆಯಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಹೀಗೆ ಹೇಳಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ವಿಜಯೇಂದ್ರ ಈ ಮಾತನ್ನಾಡಿದ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ವೇದಿಕೆಯಲ್ಲಿದ್ದರು.
ಗ್ರಾಹಕರಿಬ್ಬರ ಖಾತೆಯಿಂದಲೇ ಕೋಟಿಗಟ್ಟಲೆ ಹಣ ತನ್ನ ಖಾತೆಗೆ ವರ್ಗಾಯಿಸಿಕೊಂಡ ಬ್ಯಾಂಕ್ ಅಧಿಕಾರಿ!

ಬಾಯ್​ಫ್ರೆಂಡ್​ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 10 =
Remember me
