ಬೆಂಗಳೂರು:ಬರ ಪರಿಹಾರ ಕೇಳಲು ಐಷಾರಾಮಿ ವಿಮಾನದಲ್ಲಿ ಪ್ರಯಾಣ ಬೆಳೆಸಿರುವ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಜನರ ದುಡ್ಡು ಆಕಾಶದಲ್ಲಿ ಜಾತ್ರೆ ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ ಎಂದು ಆರೋಪಿಸಿದ್ದಾರೆ.
ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಕಿಡಿಕಾರಿದ್ದಾರೆ.
"ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆಜನರ ದುಡ್ಡು ಆಕಾಶದಲ್ಲಿ ಜಾತ್ರೆ".ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು…pic.twitter.com/Bx5VLq1hsB
ಇದನ್ನೂ ಓದಿ:ಬಿಜೆಪಿ-ಜೆಡಿಎಸ್​ ಸೀಟು ಹಂಚಿಕೆ ಬಹುತೇಕ ಫೈನಲ್; ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧೆ?
ಸಚಿವ ಜಮೀರ್​ ಅಹಮದ್​ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ. ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ….” ಎಂದು ವರ್ಣಿಸಬಹುದಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​, ಇದು ಸ”ಮಜಾವಾದಿ” ಸಿದ್ದರಾಮಯ್ಯನವರ ಸಾಮಾನ್ಯ ಜೀವನ.ಶಾಲಾ ಮಕ್ಕಳು ಬಸ್ಸುಗಳು ಸಿಗದೆ ನೇತಾಡಿಕೊಂಡು ಬಿಎಂಟಿಸಿ/ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಓಡಾಡುವುದು, ಸರ್ಕಾರದ ಯೋಜನೆಗಳಿಗೆ ಅನುದಾನಗಳ ಕೊರತೆ, ಶಾಲೆಗಳ ನವೀಕರಣಕ್ಕೆ ಹಣದ ಕೊರತೆ ಹಾಗು ಕಾಂಗ್ರೆಸ್ ಭಾಗ್ಯಗಳಿಗೇ ಅನುದಾನದ ಕೊರತೆ ಮಧ್ಯೆ ಸಿದ್ದರಾಮಯ್ಯನವರ ವಿಮಾನ ಪ್ರಯಾಣಎಂದು ಬಿಜೆಪಿ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಕಿಡಿಕಾರಿದ್ದಾರೆ.
ಸ"ಮಜಾವಾದಿ" ಸಿದ್ದರಾಮಯ್ಯನವರ ಸಾಮಾನ್ಯ ಜೀವನ!ಶಾಲಾ ಮಕ್ಕಳು ಬಸ್ಸುಗಳು ಸಿಗದೆ ನೇತಾಡಿಕೊಂಡು ಬಿಎಂಟಿಸಿ/ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಓಡಾಡುವುದು, ಸರ್ಕಾರದ ಯೋಜನೆಗಳಿಗೆ ಅನುದಾನಗಳ ಕೊರತೆ, ಶಾಲೆಗಳ ನವೀಕರಣಕ್ಕೆ ಹಣದ ಕೊರತೆ ಹಾಗು ಕಾಂಗ್ರೆಸ್ ಭಾಗ್ಯಗಳಿಗೇ ಅನುದಾನದ ಕೊರತೆ ಮಧ್ಯೆ ಸಿದ್ದರಾಮಯ್ಯನವರ ವಿಮಾನ ಪ್ರಯಾಣ!https://t.co/pqrgIt6uB1
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
